ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಮಾಂಸ ಮಾರಾಟ ನಿಷೇಧ! - Mahanayaka

ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಮಾಂಸ ಮಾರಾಟ ನಿಷೇಧ!

chicken
25/08/2024

ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಆಗಸ್ಟ್​ 26ರ ಸೋಮವಾರದಂದು ಇಡೀ ಬೆಂಗಳೂರಿನಾದ್ಯಂತ ಮಾಂಸ ಮಾರಾಟಕ್ಕೆ ನಿಷೇಧಿಸಲಾಗಿದೆ.

ನಾಳೆ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಒಂದು ದಿನ ಮಾಂಸ ಮಾರಾಟಗಾರರಿಗೆ ನಷ್ಟ ಉಂಟಾಗಲಿದೆ.

ಪಟ್ಟಣದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು ಎಂದು ಖಡಕ್ ಆಗಿ ಸೂಚಿಸಲಾಗಿದೆ. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.


ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

ಇತ್ತೀಚಿನ ಸುದ್ದಿ