ಒಂದೇ ವಾರದಲ್ಲಿ 98 ಅಡಿಗೆ ತಲುಪಿದ KRS ಡ್ಯಾಂ ನೀರಿನ ಮಟ್ಟ

krs dam
03/07/2024

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ. ಇದರಿಂದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಡ್ಯಾಂ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.

ಒಂದೇ ವಾರದಲ್ಲಿ 11 ಅಡಿಯಷ್ಟು ಡ್ಯಾಂ ಭರ್ತಿಯಾಗಿದ್ದು, ಕೆಆರ್ ಎಸ್ ನೀರಿನ ಮಟ್ಟ 98 ಅಡಿಗೆ ತಲುಪಿದೆ. ವಾರದ ಹಿಂದೆ ನೀರಿನ ಮಟ್ಟ 87 ಅಡಿಗೆ ಕುಸಿದಿತ್ತು. ಆದರೆ ಇದೀಗ ನಿರಂತರ ಮಳೆಯಿಂದಾಗಿ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲದೇ ಡ್ಯಾಂ ಸಂಪೂರ್ಣ ಭರ್ತಿಯಾಗುವ ಸಾಧ್ಯತೆ ಕಂಡು ಬಂದಿದೆ.

ಪ್ರಸ್ತುತ ಡ್ಯಾಂನಲ್ಲಿ ಸುಮಾರು 21.987 ಟಿಎಂಸಿ ನೀರು ಸಂಗ್ರಹವಾಗಿದೆ. ಒಂದು ವಾರದಲ್ಲಿ 6 ಟಿಎಂಸಿಯಷ್ಟು ನೀರು ಸಂಗ್ರಹವಾಗಿದ್ದು, ದಿನೇ ದಿನೇ ನೀರಿನ ಮಟ್ಟ ಹೆಚ್ಚಳವಾಗುತ್ತಿದೆ.

ಇಂದಿನ ನೀರಿನ ಮಟ್ಟ ಹೀಗಿದೆ:

ಗರಿಷ್ಠ ಮಟ್ಟ: 124.80 ಅಡಿ
ಇಂದಿನ ಮಟ್ಟ : 98.10 ಅಡಿ
ಗರಿಷ್ಠ ಸಂಗ್ರಹ ಸಾಮರ್ಥ: 49.452 ಟಿಎಂಸಿ
ಇAದಿನ ಸಗ್ರಹ : 21.978 ಟಿಎಂಸಿ
ಒಳ ಹರಿವು: 14,135 ಕ್ಯೂಸೆಕ್
ಹೊರ ಹರಿವು: 532 ಕ್ಯೂಸೆಕ್

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version