10:48 PM Wednesday 15 - October 2025

ಕೃಷಿ ಇಲಾಖೆಯಲ್ಲಿ 210 ಕೋಟಿ ರೂ. ಭ್ರಷ್ಟಾಚಾರ: ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು

b c patil
07/09/2021

ಬೆಂಗಳೂರು: ಭಾರೀ ಭ್ರಷ್ಟಾಚಾರ ನಡೆಸಿರುವ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಆರೋಪ ಕೇಳಿ ಬಂದಿದ್ದು, ಸಚಿವರ ವಿರುದ್ಧ ದೂರು ಕೂಡ ನೀಡಲಾಗಿದೆ ಎಂದು ವರದಿಯಾಗಿದೆ. ಕೃಷಿಯಂತ್ರಗಳ ಖರೀದಿಯಲ್ಲಿ ಬೃಹತ್ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ.

ಕೃಷಿ ಇಲಾಖೆಯಲ್ಲಿ ಸುಮಾರು 210 ಕೋಟಿ ರೂ. ಭ್ರಷ್ಟಾಚಾರ ನಡೆಸಲಾಗಿದೆ ಎಂದು ಬಿ.ಸಿ.ಪಾಟೀಲ್ ವಿರುದ್ಧ ಎಸಿಎಫ್ ಕರ್ನಾಟಕ ಸಂಘಟನೆಯ ಕೃಷ್ಣಮೂರ್ತಿ ಎಂಬವರು ಎಸಿಬಿಗೆ ದೂರು ನೀಡಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.

ರೈತರಿಗೆ ನೀಡಲಾಗುತ್ತಿರುವ ಕೃಷಿ ಯಂತ್ರಗಳ ಖರೀದಿಯ ಸಂದರ್ಭದಲ್ಲಿ ಭಾರೀ ಹಗರಣ ನಡೆಸಲಾಗಿದೆ ಎಂದು ಎಸಿಬಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದ್ದು, ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಕೃಷಿ ಇಲಾಖೆ ಹೆಚ್ಚುವರಿ ನಿರ್ದೇಶಕ ದಿವಾಕರ್ ವಿರುದ್ಧ ತನಿಖೆ ನಡೆಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ ಎಂದು ಹೇಳಲಾಗಿದೆ.

ಇನ್ನಷ್ಟು ಸುದ್ದಿಗಳು…

ಪಂಜ್ ಶಿರ್ ಗಳನ್ನು ತಾಲಿಬಾನ್ ವಶಕ್ಕೆ ಪಡೆದಿರುವುದು ಸುಳ್ಳು | ಸ್ಪಷ್ಟಪಡಿಸಿದ NRF

ನಿಫಾ ವೈರಸ್ ನ ರೋಗ ಲಕ್ಷಣಗಳೇನು ಗೊತ್ತಾ? | ರೋಗಿ ಕೋಮಾಕ್ಕೆ ಹೋಗುವ ಸಾಧ್ಯತೆ ಹೆಚ್ಚು!

ಸ್ನಾನಕ್ಕೆ ಹೋಗಿ 2 ಗಂಟೆಯಾದರೂ ವಿದ್ಯಾರ್ಥಿನಿ ಮರಳಿ ಬರಲಿಲ್ಲ | ಬಾತ್ ರೂಮ್ ಬಾಗಿಲು ಮುರಿದು ನೋಡಿದಾಗ ಕಾದಿತ್ತು ಶಾಕ್

ಕಾನ್ಶಿ ಫೌಂಡೇಶನ್ ಬಗ್ಗೆ ವಿಜಯ ಮಹೇಶ್ ಅಪಾರವಾದ ಕನಸನ್ನು ಹೊಂದಿದ್ದರು | ಯೋಗೇಶ್ ಮಾಸ್ಟರ್

ಪೆರಿಯಾರ್ ಜನ್ಮದಿನವನ್ನು ಸಾಮಾಜಿಕ ನ್ಯಾಯದಿನವನ್ನಾಗಿ ಆಚರಿಸಲು ನಿರ್ಧಾರ | ಎಂ.ಕೆ.ಸ್ಟ್ಯಾಲಿನ್ 

 

ಇತ್ತೀಚಿನ ಸುದ್ದಿ

Exit mobile version