ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್‌  - Mahanayaka

ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್‌ 

k s bhagawan
03/11/2022


Provided by

ಸಾಗರ: ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಜೆಎಂಎಫ್‌ ಸಿ ನ್ಯಾಯಾಲಯ ಬುಧವಾರ ಜಾಮೀನು ರಹಿತ ವಾರೆಂಟ್‌  ಹೊರಡಿಸಿದೆ.

ಭಗವಾನ್ ಅವರು ತಮ್ಮ ‘ರಾಮ ಮಂದಿರ ಏಕೆ ಬೇಡ’ ಕೃತಿಯಲ್ಲಿ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ತರುವ ಸಂಗತಿಗಳನ್ನು ನಿರೂಪಿಸಿದ್ದಾರೆ ಎಂದು ಆರೋಪಿಸಿ ಮಹಾಬಲೇಶ್ವರ ಎಂಬುವವರು ಇಲ್ಲಿನ ಜೆಎಂಎಫ್‌ ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಪ್ರಕರಣದ ವಿಚಾರಣೆಗೆ ಭಗವಾನ್ ಖುದ್ದು‌ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು‌ ಮೈಸೂರು ಎಸ್ ​ಪಿ ಅವರ ಮೂಲಕ ಸಮನ್ಸ್ ಜಾರಿ‌ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದರೂ ಸಹ ಇಂದು ಸಾಹಿತಿ ಭಗವಾನ್ ಅವರು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ ಎಂದು ವರದಿಯಾಗಿದೆ.

ಈ ಪ್ರಕರಣದ ಕುರಿತು ದೀರ್ಘಕಾಲದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಭಗವಾನ್ ವಿರುದ್ಧ ಐಪಿಸಿ ಸೆಕ್ಷನ್ 295(ಎ) ಅಡಿಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ