ಅಗ್ನಿಶಾಮಕ ಮತ್ತು ತುರ್ತು ಇಲಾಖೆಯಲ್ಲಿ 1,488 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿ
![fire](https://www.mahanayaka.in/wp-content/uploads/2024/12/fire.jpg)
KSFES Recruitment 2024 — ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಇಲಾಖೆಯಲ್ಲಿ 66 ಅಗ್ನಿಶಾಮಕ ಠಾಣಾಧಿಕಾರಿ (Fire Station Officer) ಹುದ್ದೆಗಳು ಸೇರಿದಂತೆ ವಿವಿಧ 1,488 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಆಗಸ್ಟ್ 28, 2024 ರಂದು ನೇಮಕಾತಿ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರ ನೇಮಕಾತಿಗೆ ಸರ್ಕಾರದಿಂದ ಮಂಜೂರಾತಿ ಪ್ರಸ್ತಾವನೆಗೆ ನಿರೀಕ್ಷಿಸಲಾಗುತ್ತಿದೆ.
ಇನ್ನೇನು ಕೆಲವೇ ದಿನಗಳಲ್ಲಿ ಈ ನೇಮಕಾತಿಗೆ ಅಧಿಸೂಚನೆ ಹೊರಬೀಳುವ ಸಾಧ್ಯತೆಗಳಿದ್ದು, ಈ ನೇಮಕತಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳು ಈಗಿನಿಂದಲೇ ಪರೀಕ್ಷೆ ಸಿದ್ಧತೆಯನ್ನು ಆರಂಭಿಸಿ.
ಯಾವ ಹುದ್ದೆಗಳಿಗೆ ಯಾವ ಶೈಕ್ಷಣಿಕ ಅರ್ಹತೆ ಹೊಂದಿರಬೇಕು?
ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಪದವಿ ಮುಗಿಸಿರಬೇಕು, ಚಾಲಕ ಮತ್ತು ಅಗ್ನಿಶಾಮಕ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವವರ 10ನೇ ತರಗತಿ ಪಾಸ್ ಆಗಿರಬೇಕು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: