KSRLP Recruitment 2025: ಪದವಿ ಪೂರ್ಣಗೊಳಿಸಿದವರಿಗೆ ಭರ್ಜರಿ ಉದ್ಯೋಗಾವಕಾಶಗಳು

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ(KSRLP Recruitment- 2025)ದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 13 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ.
ಜಿಲ್ಲಾ ಮ್ಯಾನೇಜರ್, ತಾಲೂಕು ಪ್ರೊಗ್ರಾಂ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್– ಸ್ಕಿಲ್, ಕ್ಲಸ್ಟರ್ ಸೂಪರ್ ವೈಸರ್, ತಾಲೂಕ್ ಪ್ರೋಗ್ರಾಂ ಮ್ಯಾನೇಜರ್ — ಎಸ್ ವಿಇಪಿ, ಆಫೀಸ್ ಅಸಿಸ್ಟಂಟ್, ಡಿಸ್ಟ್ರಿಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಎಂಬಿಎ, ಎಂಎಸ್ ಡಬ್ಲ್ಯೂ, ಸ್ನಾತಕೋತ್ತರ ಪದವಿ, ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ ವಯೋಮಿತಿ 45 ವರ್ಷ ನಿಗದಿಗೊಳಿಸಲಾಗಿದೆ.
ಕರ್ನಾಟಕ ಸರ್ಕಾರದ ಸಂಜೀವಿನಿ — ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಧಿಕೃತ ಜಾಲತಾಣದ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಮೇ 18 ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ksrlps.karnataka.gov.in ಗೆ ಭೇಟಿ ನೀಡಬಹುದು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: