ಚಾರ್ಮಾಡಿ ಘಾಟಿಯಲ್ಲಿ KSRTC ಬಸ್–ಕಾರು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಬಳಿ ಭಾನುವಾರ KSRTC ಬಸ್ ಮತ್ತು ಕಾರಿನ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KSRTC ಬಸ್ ಹಾಗೂ ಚಿಕ್ಕನಾಯಕನ ಹಳ್ಳಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು, ಘಾಟಿಯ ತಿರುವಿನಲ್ಲಿ ಪರಸ್ಪರ ಡಿಕ್ಕಿ ಹೊಡೆದವು. ಅಪಘಾತದಿಂದ ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿದೆ.
ಗಾಯಗೊಂಡ ನಾಲ್ವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD