KSRTC ಬಸ್ ನ ಡೋರ್ ಲಾಕ್ ಕಟ್ ಆಗಿ ನೆಲಕ್ಕೆ ಬಿದ್ದ ಮಹಿಳೆಗೆ ಗಂಭೀರ ಗಾಯ! - Mahanayaka
9:30 PM Friday 11 - September 2026

KSRTC ಬಸ್ ನ ಡೋರ್ ಲಾಕ್ ಕಟ್ ಆಗಿ ನೆಲಕ್ಕೆ ಬಿದ್ದ ಮಹಿಳೆಗೆ ಗಂಭೀರ ಗಾಯ!

chikamagalore
02/07/2024

ಚಿಕ್ಕಮಗಳೂರು : ಬಸ್ ಹತ್ತುವ ವೇಳೆ ಡೋರ್ ಲಾಕ್ ಕಟ್ ಆದ ಪರಿಣಾಮ ಮಹಿಳೆಯೊಬ್ಬರು ಬಸ್ ನಿಂದ ನೆಲಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಐದಳ್ಳಿ ಗ್ರಾಮದ ಬಳಿ ನಡೆದಿದೆ.

ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಬಾಳೆಹೊನ್ನೂರಿಗೆ ತೆರಳಲು ಮಹಿಳೆ ಬಸ್ ಹತ್ತುವಾಗ ಈ ಘಟನೆ ನಡೆದಿದೆ.
ಬಸ್ಸಿನಿಂದ ಕೆಳಗೆ ಬಿದ್ದ ಮಹಿಳೆಯನ್ನು ಶಕುಂತಲಮ್ಮ ಎಂದು ಗುರುತಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಆಲ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೆಎಸ್ ಆರ್ ಟಿಸಿ ಬಸ್ ನ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಈ ಘಟನೆ ನಡೆದಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಯಿತು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

 

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler