11:40 PM Tuesday 20 - January 2026

ಗಾಂಜಾ, ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ ರವಿ, ಬಿಜೆಪಿ ಸಂಸ್ಕೃತಿ | ರಾಮಲಿಂಗಾರೆಡ್ಡಿ ತಿರುಗೇಟು

ramalinga reddy
12/08/2021

ಬೆಂಗಳೂರು: ಕಾಂಗ್ರೆಸ್ ನವರು ಬೇಕಾದರೆ, ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಹುಕ್ಕಾ ಬಾರ್ ತೆರೆಯಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಗೆ ಕಾಂಗ್ರೆಸ್ ಮುಖಂಡರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ನಮಗೂ ಮಾತನಾಡಲು ಬರುತ್ತದೆ ಎಂದು ಸಿ.ಟಿ.ರವಿಗೆ ಎಚ್ಚರಿಕೆ ನೀಡಿದ್ದಾರೆ.

 

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿದ ಕಾಂಗ್ರೆಸ್ ನ ಹಿರಿಯ ಮುಖಂಡ ರಾಮಲಿಂಗರೆಡ್ಡಿ, ಹುಕ್ಕಾ ಬಾರ್, ಗಾಂಜಾ, ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ ರವಿ ಹಾಗೂ ಬಿಜೆಪಿಯವರ ಸಂಸ್ಕೃತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ದೇಶವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷ. ಬಿಜೆಪಿ ಆಗಲಿ, ಆರ್ ಎಸ್ ಎಸ್ ಆಗಲಿ ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಇವರು ಯಾರ ಜತೆ ಶಾಮೀಲಾಗಿದ್ದರು ಎಂಬುದನ್ನು ನೋಡಿದರೆ ಇವರ ಬಗ್ಗೆ ತಿಳಿಯುತ್ತದೆ ಎಂದು ಅವರು ಹೇಳಿದರು.

 

ಸಿ.ಟಿ ರವಿ ಅವರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ಇತಿ ಮಿತಿಯಲ್ಲಿ ಮಾತನಾಡಬೇಕು, ಇಂತಹ ಉದ್ಧಟತನದ ಮಾತುಗಳನ್ನು ನಿಲ್ಲಿಸಬೇಕು. ನಾವು ಅವರ ಮುಖಂಡರ ವಿರುದ್ಧ ಇದಕ್ಕಿಂತ ತೀಕ್ಷ್ಣವಾಗಿ ಮಾತನಾಡಲು ನಮಗೂ ಬರುತ್ತದೆ ಎಂದು ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದರು.

 

ಇನ್ನಷ್ಟು ಸುದ್ದಿಗಳು…

ಕಾಂಗ್ರೆಸ್ ನವರು ಬೇಕಿದ್ದರೆ ‘ನೆಹರೂ ಹುಕ್ಕಾ ಬಾರ್’ ತೆರೆಯಲಿ: ಸಿ.ಟಿ.ರವಿ ಹೇಳಿಕೆ

ಇಳೆಯದಳಪತಿ ನಟ ವಿಜಯ್-ಎಂ.ಎಸ್.ಧೋನಿ ಭೇಟಿ | ಕಾರಣ ಏನು ಗೊತ್ತಾ?

ತರಬೇತಿ ವೇಳೆ ಕಾನ್ಸ್ ಟೇಬಲ್ ಸಾವು | ಅಧಿಕಾರಿಗಳ ವಿರುದ್ಧ ಟೈನಿ ಕಾನ್ಸ್ ಟೇಬಲ್ ಪ್ರತಿಭಟನೆ

3ನೇ ಅಲೆಯ ಭೀತಿ: 40 ಹಾಸಿಗೆಗಳ ಮಕ್ಕಳ ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ

ನೀರಜ್ ಚೋಪ್ರಾರನ್ನು ಅನುಕರಿಸಿ ರೋಡಲ್ಲಿ ನಿಂತು ಈಟಿ ಎಸೆದ ರಾಖಿ ಸಾವಂತ್ | ಮುಂದೇನಾಯ್ತು?

ಇತ್ತೀಚಿನ ಸುದ್ದಿ

Exit mobile version