ಕುಡಿದು ತೂರಾಡುತ್ತಾ, ತೊದಲು ಮಾತನಾಡುತ್ತಾ ಶಾಲೆಗೆ ಪಾಠ ಮಾಡಲು ಬಂದ ಶಿಕ್ಷಕ - Mahanayaka

ಕುಡಿದು ತೂರಾಡುತ್ತಾ, ತೊದಲು ಮಾತನಾಡುತ್ತಾ ಶಾಲೆಗೆ ಪಾಠ ಮಾಡಲು ಬಂದ ಶಿಕ್ಷಕ

school
16/11/2021

ಕುಣಿಗಲ್: ಶಿಕ್ಷಕನೋರ್ವ ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿ ಇದೀಗ ಅಮಾನತುಗೊಂಡಿದ್ದು,  ನ.12ರಂದು ಕುಡಿದು ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕನನ್ನು ಕಂಡ ಗ್ರಾಮಸ್ಥರು ಶಿಕ್ಷಣ ಇಲಾಖಾ ಅಧಿಕಾರಿಗಳಿ ಮಾಹಿತಿ ನೀಡಿದ್ದರು ಎಂದು ವರದಿಯಾಗಿದೆ.


Provided by
Provided by
Provided by
Provided by
Provided by
Provided by
Provided by

ಜಿಲ್ಲೆ ಕುಣಿಗಲ್​ ತಾಲೂಕಿನ ಕೊತ್ತಗೆರೆ ಹೋಬಳಿ ಸೂಳೆಕುಪ್ಪೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಡಿ.ಎನ್​.ಹನುಮಂತರಾಯಪ್ಪ ಮದ್ಯಪಾನ ಮಾಡಿ ಶಾಲೆಗೆ ಹಾಜರಾದ ಶಿಕ್ಷಕನಾಗಿದ್ದಾನೆ ಎಂದು ತಿಳಿದು ಬಂದಿದೆ. ಗೈರು, ಕರ್ತವ್ಯ ಲೋಪ ಸೇರಿ ಇನ್ನಿತರ ಕಾರಣಗಳಿಂದ ಸೇವೆಯಿಂದ ಅಮಾನತು ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ.

ನವೆಂಬರ್ 12ರಂದು ಕುಡಿದು ಚಿತ್ತಾಗಿ ತೂರಾಡುತ್ತಾ, ತೊದಲು ಮಾತನಾಡುತ್ತಾ ಶಿಕ್ಷಕ ಶಾಲೆಗೆ ಆಗಮಿಸಿದ್ದಾನೆನ್ನಲಾಗಿದೆ. ಮಕ್ಕಳಿಗೆ ಮಾದರಿಯಾಗಬೇಕಾದ ಶಿಕ್ಷಕ ತಾನು ಕುಡಿದು ತೂರಾಡುತ್ತಿರುವುದನ್ನು ಕಂಡ ಗ್ರಾಮಸ್ಥರು ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಪ್ರತಾಪ್ ಸಿಂಹ ಹೆಣ್ಣೋ ಗಂಡೋ ಎಂದು ನೋಡಿಕೊಳ್ಳಲಿ | ಇಕ್ಬಾಲ್ ಅನ್ಸಾರಿ ತಿರುಗೇಟು

ಪ್ರವಚನ ನೀಡುತ್ತಲೇ ವೇದಿಕೆಯಲ್ಲಿಯೇ ಹೃದಯಾಘಾತದಿಂದ ನಿಧನರಾದ ಸ್ವಾಮೀಜಿ

ಡಿಬೆಟ್ ಗೆ ಬನ್ನಿ, ನನ್ನ ಹಿಂದುತ್ವ ಏನು ಅಂತ ಬೋಧನೆ ಮಾಡುತ್ತೇನೆ | ದೀಪು ಶೆಟ್ಟಿಗಾರ್ ಸವಾಲು

ಬಸ್ ನಿಲ್ದಾಣದಲ್ಲಿಯೇ ಬಿಟ್ಟು ಬಂದಿದ್ದಕ್ಕೆ ಕೆಎಸ್ಸಾರ್ಟಿಸಿಗೆ ಬಿಸಿ ಮುಟ್ಟಿಸಿದ ಹಿರಿಯ ನಾಗರಿಕ!

ಕಂಗನಾ ಹೇಳಿದ್ದನ್ನು ಮುಸ್ಲಿಮ್ ವ್ಯಕ್ತಿ ಹೇಳಿದ್ದರೆ, ಮೊಣಕಾಲಿಗೆ ಗುಂಡಿಟ್ಟು ಜೈಲಿಗಟ್ಟಲಾಗುತ್ತಿತ್ತು | ಓವೈಸಿ

ಶರಣ್ ಪಂಪ್ ವೆಲ್ ಗೆ ಮುಸ್ಲಿಮ್ ಸಂಸ್ಥೆಗಳ ಗುತ್ತಿಗೆಯ ಹಣ ಆಗುತ್ತದೆ, ಮುಸ್ಲಿಮರು ಆಗುವುದಿಲ್ಲ | ತರಾಟೆಗೆತ್ತಿಕೊಂಡ ಬಿರುವೆರ್ ಕುಡ್ಲ

ಇತ್ತೀಚಿನ ಸುದ್ದಿ