ಸತತ ವಿದೇಶ ಪ್ರವಾಸದಿಂದ ಸುಸ್ತಾದ್ರಾ ಕುಮಾರಸ್ವಾಮಿ?: ಹೇಗಿದೆ ಆರೋಗ್ಯ ಸ್ಥಿತಿ? - Mahanayaka

ಸತತ ವಿದೇಶ ಪ್ರವಾಸದಿಂದ ಸುಸ್ತಾದ್ರಾ ಕುಮಾರಸ್ವಾಮಿ?: ಹೇಗಿದೆ ಆರೋಗ್ಯ ಸ್ಥಿತಿ?

kumaraswamy
30/08/2023


Provided by

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಿಂದ ಆರೋಗ್ಯ ಸಂಬಂಧ ಪ್ರಕಟಣೆ ಹೊರಡಿಸಿದೆ.

ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಪತ್ನಿ ಅನಿತಾ ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದರು. ಎರಡು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ಯ ಮನೆಯಲ್ಲೇ ಇದ್ದರು. ಮಂಗಳವಾರ ತಡರಾತ್ರಿ ಇವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ಅಲ್ಲದೇ ಸತತ ಪ್ರವಾಸದ ಹಿನ್ನೆಲೆ ಜ್ವರ ಕಾಣಿಸಿಕೊಂಡಿದ್ದು, ತಡರಾತ್ರಿ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಹಿಂದೆ ಕೂಡಾ ಚುನಾವಣಾ ಸಮಯದಲ್ಲಿ ನಿರಂತರ ಪ್ರಚಾರದಲ್ಲಿ ತೊಡಗಿದ್ದ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡಿದ್ದರು. ಇದೀಗ ಎರಡೆರಡು ಬಾರಿ ವಿದೇಶ ಪ್ರವಾಸ ಮಾಡಿದ್ದು, ಸತತ ಪ್ರವಾಸದಿಂದ ಅನಾರೋಗ್ಯ ಕಾಣಿಸಿಕೊಂಡಿದೆ.
ಇಂದು ಬೆಳಗ್ಗಿನ ಜಾವ 3.40ಕ್ಕೆ ಕುಮಾರಸ್ವಾಮಿಯವರು ಸುಸ್ತು ಬಳಲಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.ಸದ್ಯ ಹೆಚ್ಡಿಕೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಡಾ. ಸತೀಶ್ಚಂದ್ರ ಹಾಗೂ ವೈದ್ಯರ ತಂಡ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಕುಮಾರಸ್ವಾಮಿಯವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಅವರ ಶೀಘ್ರ ಚೇತರಿಕೆಗಾಗಿ ಎಲ್ಲರೂ ಪ್ರಾರ್ಥಿಸೋಣ ಎಂದು ಅಪೋಲೋ ಆಸ್ಪತ್ರೆಯ ಘಟಕಾಧ್ಯಕ್ಷ ಡಾ ಗೋವಿಂದಯ್ಯ ಯತೀಶ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ