10:00 AM Saturday 23 - August 2025

ಮೈತ್ರಿಗೆ ಮೊದಲು ಸಿಎಂ ಇಬ್ರಾಹಿಂ ಜೊತೆ ಕುಮಾರಸ್ವಾಮಿ ಎರಡು ಸುತ್ತು ಮಾತುಕತೆ ನಡೆಸಿದ್ದಾರೆ: ಹೆಚ್.ಡಿ.ದೇವೇಗೌಡ

h d devegowda
09/10/2023

ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಹಾಗೂ ಸಿಎಂ ಇಬ್ರಾಹಿಂ ಹೇಳಿಕೆ ಕುರಿತು  ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮಾಧ್ಯಮದವ್ರಿಗೆ ಪ್ರತಿಕ್ರಿಯೆ ನೀಡಿದರು.

ಕುಮಾರಸ್ವಾಮಿಯವರು ಮೈತ್ರಿಗೆ ಮೊದಲು ಜೆಡಿಎಸ್ ನ 19 ಎಂಎಲ್‌ ಎ, 8 ಎಂಎಲ್‌ ಸಿ, ಪಕ್ಷದ ಅಧ್ಯಕ್ಷ ಸಿಎಂ ಇಬ್ರಾಹಿಂ ಜೊತೆ ಎರಡು ಸುತ್ತು ಮಾತುಕತೆ ನಡೆಸಿದ್ದಾರೆ. ಇದಾದ ಬಳಿಕ ಕುಮಾರಸ್ವಾಮಿ ಗೃಹಮಂತ್ರಿಗಳನ್ನು ಭೇಟಿ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನು ಸೀಟು ಹಂಚಿಕೆಯ ಬಗ್ಗೆ ಇನ್ನೂ ಚರ್ಚೆ ನಡೆಯಬೇಕಷ್ಟೇ. ದಸರಾ ಕಳೆದು ಸೀಟು ಹಂಚಿಕೆ ಚರ್ಚೆ ನಡೆಯಲಿದೆ. ಸೆಸನ್ ಕಳೆದು ನನ್ನ ಆರೋಗ್ಯ ಸುಧಾರಿಸಿದರೆ ನಾನು ಅಥವಾ ಕುಮಾರಸ್ವಾಮಿ ಮತ್ತೆ ಗೃಹಮಂತ್ರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದರು.

ಹಿಂದಿನ ಚುನಾವಣೆಯ ಮತಗಳಿಕೆ ಒಟ್ಟು ಗೂಡಿಸಿ ಒಂದು ನಿರ್ಧಾರಕ್ಕೆ ಬರಲಾಗಿದೆ. ಆದರೆ ಯಾವ ಕ್ಷೇತ್ರ ಅನ್ನೋ ಬಗ್ಗೆ ಇನ್ನೂ ಫೈನಲ್ ಆಗಿಲ್ಲ. ಮಂಡ್ಯ ಸೇರಿದಂತೆ ಯಾವುದೇ ತೀರ್ಮಾನ ಆಗಿಲ್ಲ. ಸದ್ಯ ಹಾಸನ ಜೆಡಿಎಸ್, ರಾಮನಗರ ಕಾಂಗ್ರೆಸ್ ಕೈಯಲ್ಲಿದೆ. ಉಳಿದೆಡೆ ಬಿಜೆಪಿನೇ ಇದೆ. ಕಾಂಗ್ರೆಸ್ 28 ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಆ ಕಾರಣಕ್ಕೆ ಬಿಜೆಪಿ,ಜೆಡಿಎಸ್ ಒಂದುಗೂಡಿ ಹೋಗುವ ನಿರ್ಧಾರಕ್ಕೆ ಬಂದಿದ್ದೇವೆ ಎಂದರು.

ಇತ್ತೀಚಿನ ಸುದ್ದಿ

Exit mobile version