ಮಾಜಿ ಸಿಎಂ ಕುಮಾರಸ್ವಾಮಿ ಮಾಧ್ಯಮ ಸಲಹೆಗಾರ ಕೆ.ಸಿ.ಸದಾನಂದ ಹೃದಯಾಘಾತದಿಂದ ನಿಧನ - Mahanayaka
12:21 PM Thursday 16 - October 2025

ಮಾಜಿ ಸಿಎಂ ಕುಮಾರಸ್ವಾಮಿ ಮಾಧ್ಯಮ ಸಲಹೆಗಾರ ಕೆ.ಸಿ.ಸದಾನಂದ ಹೃದಯಾಘಾತದಿಂದ ನಿಧನ

sadananda
06/07/2021

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರ ಕೆ.ಸಿ. ಸದಾನಂದ ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.


Provided by

ರಾತ್ರಿ ಹೃದಯಾಘಾತವಾದ ತಕ್ಷಣ ಅವರನ್ನು ಬೆಂಗಳೂರಿನ  ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸದಾ ಕ್ರಿಯಾಶೀಲವಾಗಿದ್ದ ಚನ್ನಪಟ್ಟಣದ ಸದಾನಂದ ಸಂಜೆವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು.ಹೆಚ್.ಡಿ.ಕುಮಾರಸ್ವಾಮಿ ಅವರ ನಂಬಿಕಸ್ಥನಾಗಿದ್ದ ಸದಾನಂದ, ಈಗಲೂ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು.

ಇತ್ತೀಚಿನ ಸುದ್ದಿ