ಡಿಸೆಂಬರ್ 17ರಂದು ‘ಕುಂಪಲೋತ್ಸವ 2022’ ಕಾರ್ಯಕ್ರಮ
ಮಂಗಳೂರಿನ ಕುಂಪಲ ಬಾಲಕೃಷ್ಣ ಮಂದಿರದ 25ನೇ ವರ್ಷಾಚರಣೆ ಅಂಗವಾಗಿ ಕುಂಪಲದಲ್ಲಿ ಇದೇ 17ರಂದು ‘ಕುಂಪಲೋತ್ಸವ 2022’ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಈ ಕುರಿತು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬಾಲಕೃಷ್ಣ ಮಂದಿರದ ಅಧ್ಯಕ್ಷ ಸತೀಶ ಕುಂಪಲ, ‘ನಮ್ಮ ಸಂಸ್ಥೆಯ ರಜತ ವರ್ಷಾಚರಣೆ ಅಂಗವಾಗಿ ಒಂದು ವರ್ಷದಿಂದ ಹಲವಾರು ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ.
ಮೂರು ಕಡೆ ಬಸ್ ಪ್ರಯಾಣಿಕರ ತಂಗುದಾಣ ನಿರ್ಮಿಸಿದ್ದೇವೆ. ಅಶಕ್ತ ಕುಟುಂಬವೊಂದಕ್ಕೆ ಉಚಿತವಾಗಿ ಮನೆ ನಿರ್ಮಿಸಿಕೊಟ್ಟಿದ್ದೇವೆ. ಸ್ಮಶಾನ ಅಭಿವೃದ್ಧಿ ಕಾಮಗಾರಿಯನ್ನು ನಿರ್ವಹಿಸಿದ್ದೇವೆ. ಭಜನಾ ಸಪ್ತಾಹದಂತಹ ಆಧ್ಯಾತ್ಮಿಕ ಕಾರ್ಯಕ್ರಮಗಳನ್ನು ಆಯೊಜಿಸಿದ್ದೇವೆ’ ಎಂದರು.
‘ರಜತ ವರ್ಷಾಚರಣೆ ಸಮಾರೋಪದ ಅಂಗವಾಗಿ ಕುಂಪಲೋತ್ಸವ ನಡೆಯಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್, ಸಮಾಜ ಕಲ್ಯಾಣ ಸಚಿವ ಕೊಟ ಶ್ರೀನಿವಾಸ ಪೂಜಾರಿ ಮೊದಲಾದ ಗಣ್ಯರು ಭಾಗವಹಿಸುವರು. ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡುವರು’ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka