ಕುಪ್ಪೆಟ್ಟಿಯ ಮುಖ್ಯರಸ್ತೆ: ಬಲಿಗಾಗಿ ಬಾಯ್ತೆರೆದು ನಿಂತಿವೆ ನೀರು ತುಂಬಿದ ಹೊಂಡಗುಂಡಿ!

ಬೆಳ್ತಂಗಡಿ: ತಾಲೂಕಿನ ಉರುವಾಲು ಗ್ರಾಮದ ಕುಪ್ಪೆಟ್ಟಿಯ ಮುಖ್ಯರಸ್ತೆಯಲ್ಲಿ ಹಲವು ವರ್ಷಗಳಿಂದ ರಸ್ತೆಯಲ್ಲಿ ಹೊಂಡಗಳು ಬಾಯ್ತೆರೆದು ನಿಂತಿವೆ. ಬೇಸಿಗೆ ಕಾಲದಲ್ಲಿ ಧೂಳಿನ ಕಾಟವಾದರೆ ಮಳೆಗಾಲದಲ್ಲಿ ಈ ಹೊಂಡಗಳಲ್ಲಿ ನೀರು ನಿಂತು ವಾಹನ ಸವಾರರಿಗೆ, ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ ಎಂದು ಇಲ್ಲಿನ ಸ್ಥಳೀಯರು ದೂರಿದ್ದಾರೆ.
ಹೊಂಡಗುಂಡಿಗಳ ರಸ್ತೆ ದ್ವಿಚಕ್ರ ವಾಹನ ಸವಾರರಿಗಂತೂ ಮರಣ ಬಾವಿಯಿದ್ದಂತೆ. ಕಳೆದ ಹಲವು ದಿನಗಳಿಂದ ಮಳೆ ಅಬ್ಬರ ಕೂಡ ಕಾಣಿಸಿಕೊಂಡಿದ್ದು, ಈ ಹೊಂಡ ಗುಂಡಿಗಳಿಂದ ತುಂಬಿರುವ ರಸ್ತೆಯಲ್ಲಿ ಜನರು ಒಂದು ಬದಿಯಿಂದ ಇನ್ನೊಂದು ಬದಿಗೆ ಸಾಗಲು ಕಷ್ಟಪಡುವಂತಾಗಿದೆ.
ಈ ಗುಂಡಿಗಳಿಂದ ಕೇವಲ ವಾಹನ ಸವಾರರು ಮಾತ್ರವಲ್ಲ, ಇಲ್ಲಿನ ಅಂಗಡಿ ಮುಂಗಟ್ಟು, ವಯೋ ವೃದ್ಧರು, ಶಾಲಾ ಮಕ್ಕಳಿಗೂ ತೊಂದರೆಯಾಗುತ್ತಿದೆ. ನಿತ್ಯವೂ ರಾಜಕಾರಣಿಗಳು, ಅಧಿಕಾರಿಗಳು ಓಡಾಡುವ ಈ ರಸ್ತೆಯ ಗೋಳನ್ನು ಕೇಳುವವರಿಲ್ಲದಂತಾಗಿದೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸೂಕ್ತವಾದ ಪರಿಹಾರವನ್ನು ಕಂಡು, ಈ ಸಮಸ್ಯೆಯನ್ನು ಬಗೆಹರಿಸುವಂತೆ ಊರಿನ ನಾಗರಿಕರು ಆಗ್ರಹಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD