ಕುವೈತ್ ಅಗ್ನಿ ದುರಂತ: 45 ಭಾರತೀಯರ ಮೃತದೇಹ ತಂದ ಐಎಎಫ್ ವಿಶೇಷ ವಿಮಾನ

14/06/2024

ಕುವೈತ್ ನ ಮಂಗಾಫ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಪ್ರಾಣ ಕಳೆದುಕೊಂಡ 45 ಮಂದಿ ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನ ಕೊಚ್ಚಿಗೆ ತೆರಳಿದೆ ಎಂದು ಕುವೈತ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಶುಕ್ರವಾರ ಬೆಳಿಗ್ಗೆ ತಿಳಿಸಿದೆ.

“ಕುವೈತ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 45 ಭಾರತೀಯರ ಮೃತದೇಹಗಳನ್ನು ಹೊತ್ತ ವಿಶೇಷ ಐಎಎಫ್ ವಿಮಾನವು ಕೊಚ್ಚಿಗೆ ಹೊರಟಿದೆ” ಎಂದು ಕುವೈತ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ‘ಎಕ್ಸ್@KVSinghMPGonda’ ಪೋಸ್ಟ್‌ನಲ್ಲಿ ಬರೆಯಲಾಗಿದೆ.

ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಒಟ್ಟು 45 ಭಾರತೀಯರಲ್ಲಿ ಕನಿಷ್ಠ 23 ಮಂದಿ ಕೇರಳದ ನಿವಾಸಿಗಳಾಗಿದ್ದಾರೆ.

ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಮೃತಪಟ್ಟವರಲ್ಲಿ ಏಳು ತಮಿಳುನಾಡಿನವರು, ಮೂವರು ಆಂಧ್ರಪ್ರದೇಶದವರು, ಮತ್ತು ಬಿಹಾರ, ಒಡಿಶಾ, ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ, ಜಾರ್ಖಂಡ್, ಹರಿಯಾಣ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದಿಂದ ತಲಾ ಒಬ್ಬರು ಇದ್ದಾರೆ ಎಂದು ಹೇಳಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version