ಕುಸಿದುಬಿದ್ದು ಕಾರ್ಮಿಕ ಗಂಭೀರ: ಆಸ್ಪತ್ರೆಗೆ ದಾಖಲು

shivaram naika
13/07/2023

ಉಡುಪಿ ಚಿತ್ತರಂಜನ್ ಸರ್ಕಲ್ ಬಳಿಯ ಹೋಟೆಲ್ ನಲ್ಲಿ ಚಾ ಕುಡಿಯಲು‌ ಬಂದ ಕಾರ್ಮಿಕನೋರ್ವರು ಒಮ್ಮೇಲೆ ಕುಸಿದುಬಿದ್ದು ಗಂಭೀರವಾಗಿ ಗಾಯಗೊಂಡ‌ ಘಟನೆ ಇಂದು ನಡೆದಿದೆ.

ಪಿಪಿಸಿ ಕಾಲೇಜಿನ ಬಳಿ‌ಯ 46ವರ್ಷದ ಶಿವರಾಮ ನಾಯ್ಕ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ತಕ್ಷಣವೇ ಸ್ಥಳೀಯರು‌ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಕರೆ ಮಾಡಿ ಮಾಹಿತಿ ನೀಡಿದರು. ಕೂಡಲೇ ಸ್ಪಂದಿಸಿ ಸ್ಥಳಕ್ಕೆ ಬಂದ ಒಳಕಾಡು ಅವರು, ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version