ಮೂಲಸೌಕರ್ಯ ಕೊರತೆ: ಚಾಮರಾಜನಗರದಲ್ಲಿ ಬಾಗಿಲು ಮುಚ್ಚಿದ 13 ಶಾಲೆಗಳು

chamarajanagara
17/08/2023

ಚಾಮರಾಜನಗರ: ಮೂಲಸೌಕರ್ಯ ಕೊರತೆಯಿಂದಾಗಿ ಗಡಿಜಿಲ್ಲೆ ಚಾಮರಾಜನಗರದಲ್ಲಿ 13 ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚಿದೆ.

2023-24 ನೇ ಶೈಕ್ಷಣಿಕ ಸಾಲಿನಲ್ಲಿ ಮೂಲಸೌಕರ್ಯ ಕೊರತೆ, ಶಿಥಿಲವಾದ ಕಟ್ಟಡಗಳಿಂದಾಗಿ ಶೂನ್ಯ ದಾಖಲಾತಿ ಉಂಟಾಗಿ ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 13 ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿದ್ದು ಇದರಲ್ಲಿ ಉರ್ದು ಮಾಧ್ಯಮದ ಶಾಲೆಯೂ ಸೇರಿದೆ.

ತಮಿಳುನಾಡು ಹಾಗೂ ಕೇರಳ  ಎರಡು ಗಡಿಯನ್ನು ಹಂಚಿಕೊಂಡಿರುವ ಚಾಮರಾಜನಗರ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಿಗೆ ಸಿಗಬೇಕಾದ ಉತ್ತೇಜನ ಸಿಗದಿರುವುದರಿಂದ ಈ ಪರಿಸ್ಥಿತಿ ಉಂಟಾಗಿದೆ.‌ ಕೊರೊನಾ ಲಾಕ್ ಡೌನ್ ವೇಳೆ ಖಾಸಗಿ ಶಾಲೆಗಳಿಗೆ ಹೆಚ್ಚು ಶುಲ್ಕ ಭರಿಸಲಾಗದೇ ಖಾಸಗಿ ಶಾಲೆಗಳಿಂದ ದಾಖಲೆ ಮಟ್ಟದಲ್ಲಿ ಮಕ್ಕಳು ಸರ್ಕಾರಿ ಶಾಲೆಗಳಿಗೆ ಸೇರಿದ್ದರು. ಈಗ ಪರಿಸ್ಥಿತಿ ವ್ಯತಿರಿಕ್ತವಾಗಿದ್ದು ಸರ್ಕಾರಿ ಶಾಲೆಗಳ ಮೂಲಸೌಕರ್ಯ ಕೊರತೆಯಿಂದ ಬೇಸತ್ತು 13 ಶಾಲೆಗಳಲ್ಲಿ ಶೂನ್ಯ ದಾಖಲಾತಿ ಆಗಿದೆ.

ಇನ್ನು, ಈ ಸಂಬಂಧ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್ ಪ್ರತಿಕ್ರಿಯೆ ಕೊಟ್ಟಿದ್ದು ಶೂನ್ಯ ದಾಖಲಾತಿ ಆಗಿರುವುದರಿಂದ 13 ಸರ್ಕಾರಿ ಶಾಲೆಗಳು ಬಂದ್ ಆಗಿದೆ. ಸಿಆರ್ ಎಸ್ ಅನುದಾನ ಬಳಸಿಕೊಂಡು ಶಾಲಾಭಿವೃದ್ಧಿ ಜೊತೆಗೆ ಒಂದೊಂದು ಶಾಲೆಯನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version