ಲಾಹೋರ್ ಮಾರುಕಟ್ಟೆಯಲ್ಲಿ ಭಾರೀ ಸ್ಫೋಟ; 3 ಸಾವು, 20 ಮಂದಿಗೆ ಗಾಯ - Mahanayaka

ಲಾಹೋರ್ ಮಾರುಕಟ್ಟೆಯಲ್ಲಿ ಭಾರೀ ಸ್ಫೋಟ; 3 ಸಾವು, 20 ಮಂದಿಗೆ ಗಾಯ

pak blest
21/01/2022


Provided by

ಇಸ್ಲಾಮಾಬಾದ್: ಪಾಕಿಸ್ತಾನದ ಲಾಹೋರ್ ನಗರದ ಪ್ರಸಿದ್ಧ ಅನಾರ್ಕಲಿ ಮಾರುಕಟ್ಟೆಯಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ ಮೂರು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ನಡೆದಿದೆ.

ಲಾಹೋರ್ ನ ಅನಾರ್ಕಲಿ ಮಾರುಕಟ್ಟೆಯ ಪಾನ್ ಮಂಡಿಯಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಮೂವರು ಮೃತಪಟ್ಟಿರುವುದನ್ನು ಲಾಹೋರ್ ಪೊಲೀಸ್ ವಕ್ತಾರ ರಾಣಾ ಆರಿಫ್ ಖಚಿತಪಡಿಸಿದ್ದಾರೆ.
ಡಾನ್  ನ್ಯೂಸ್  ಪೇಪರ್  ವರದಿ ಪ್ರಕಾರ, ಸ್ಫೋಟದಿಂದಾಗಿ ಹತ್ತಿರದ ಅಂಗಡಿಗಳು ಮತ್ತು ಕಟ್ಟಡಗಳ ಗಾಜುಗಳು ಪುಡಿಪುಡಿಯಾಗಿವೆ. ಆದರೆ, ಈ ವರೆಗೆ ಯಾವುದೇ ಉಗ್ರ ಸಂಘಟನೆ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ.

ಸ್ಫೋಟದ ಸ್ವರೂಪವನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಸದ್ಯ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತನಿಖೆ ಮುಂದುವರಿಸಲಾಗಿದೆ ಎಂದು ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಡಾ. ಮೊಹಮ್ಮದ್ ಅಬಿದ್ ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗರ್ಭಿಣಿ ಅರಣ್ಯ ರಕ್ಷಕಿ ಮೇಲೆ ದಂಪತಿಯಿಂದ ಥಳಿತ

ಲಂಚ ಸ್ವೀಕರಿಸುತ್ತಿದ್ದ ವೇಳೆ ಪಿಡಿಓ ಬಂಧನ

2022ರ ಆಸ್ಕರ್ ಪ್ರಶಸ್ತಿಗೆ ತಮಿಳು ಚಿತ್ರ ‘ಜೈ ಭೀಮ್’ ಆಯ್ಕೆ

ಕೋವಿಶೀಲ್ಡ್, ಕೋವ್ಯಾಕ್ಸಿನ್ ಮುಕ್ತ ಮಾರುಕಟ್ಟೆಗೆ ಡಿಜಿಸಿಐ ಶಿಫಾರಸು

ದ್ವಿಚಕ್ರ ವಾಹನ – ಲಾರಿ ಮುಖಾಮುಖಿ ಡಿಕ್ಕಿ; ಸವಾರ ಸಾವು

 

 

ಇತ್ತೀಚಿನ ಸುದ್ದಿ