ಕಾರು ಹರಿಸಿ ರೈತ ಹೋರಾಟಗಾರರ ಕೊಲೆ ಕೇಸ್: ಮಾಜಿ ಕೇಂದ್ರ ಸಚಿವರ ಆರೋಪಿ ಪುತ್ರನಿಗೆ ಜಾಮೀನು - Mahanayaka

ಕಾರು ಹರಿಸಿ ರೈತ ಹೋರಾಟಗಾರರ ಕೊಲೆ ಕೇಸ್: ಮಾಜಿ ಕೇಂದ್ರ ಸಚಿವರ ಆರೋಪಿ ಪುತ್ರನಿಗೆ ಜಾಮೀನು

22/07/2024


Provided by

ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಎಂಟು ಜನ ರೈತ ಹೋರಾಟಗಾರರ ಮೇಲೆ ಕಾರು ಹಾಯಿಸಿ ಕೊಂದ ಘಟನೆ ನಿಮಗೆ ನೆನಪಿರಬಹುದು. ಪ್ರಕರಣದ ಆರೋಪಿ ಮಾಜಿ ಕೇಂದ್ರ ಸಚಿವ ಅಜಯ್‌ ಕುಮಾರ್‌ ಮಿಶ್ರಾ ರ ಪುತ್ರ ಆಶಿಶ್‌ ಮಿಶ್ರಾಗೆ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ದೆಹಲಿ ಮತ್ತು ಲಖನೌಗೆ ಪ್ರವೇಶಿಸದಂತೆ ಆಶಿಶ್‌ ಮಿಶ್ರಾಗೆ ನಿರ್ಬಂಧ ವಿಧಿಸಲಾಗಿದೆ. ಜತೆಗೆ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ವಿಚಾರಣೆಗೆ ಹಾಜರಾಗುವ ಎಲ್ಲ ಸಾಧ್ಯತೆಗಳನ್ನು ಪರಿಗಣಿಸಿ ಆರೋಪಿಗೆ ಜಾಮೀನಿ ಮಂಜೂರು ಮಾಡಲಾಗಿದೆ. 117 ಸಾಕ್ಷಿಗಳ ಪೈಕಿ ಏಳು ಮಂದಿಯನ್ನು ಮಾತ್ರ ಇದುವರೆಗೆ ವಿಚಾರಣೆಗೆ ಒಳಪಡಿಸಲಾಗಿದೆ. ಉಳಿದ ಸಾಕ್ಷಿಗಳ ಹೇಳಿಕೆ ದಾಖಲಿಸುವ ಮೂಲಕ ವಿಚಾರಣೆಯನ್ನು ತ್ವರಿತಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.

2023ರ ಸೆ.26ರಂದು ಮಿಶ್ರಾಗೆ ನೀಡಿದ್ದ ಮಧ್ಯಂತರ ಜಾಮೀನಿನಲ್ಲಿನ ಷರತ್ತುಗಳನ್ನು ಸಡಿಲಗೊಳಿಸಿದ ಸುಪ್ರೀಂ ಕೋರ್ಟ್‌, ಅನಾರೋಗ್ಯಕ್ಕೀಡಾಗಿದ್ದ ತಾಯಿಯನ್ನು ನೋಡಿಕೊಳ್ಳಲು ಹಾಗೂ ಪುತ್ರಿಗೆ ಚಿಕಿತ್ಸೆ ಕೊಡಿಸುವುದಕ್ಕಾಗಿ ದೆಹಲಿಗೆ ಭೇಟಿ ನೀಡಲು ಆಶಿಶ್‌ಗೆ ಅನುವು ಮಾಡಿಕೊಟ್ಟಿತ್ತು. ಜತೆಗೆ ಮಧ್ಯಂತರ ಜಾಮೀನಿನ ಅವಧಿಯನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ