ಲಕ್ಷೀ ಬಾರ್ ಆ್ಯಂಡ್ ರೆಸ್ಟೊರೆಂಟ್ ಗೆ ನುಗ್ಗಿ 50 ಸಾವಿರ ಹಣ ಕಳವು
ಶಂಕರನಾರಾಯಣ: ಹೆಬ್ರಿ ತಾಲೂಕಿನ ಬೆಳ್ವೆ ಗ್ರಾಮದ ಗೋಳಿಯಂಗಡಿ ಲಕ್ಷೀ ಬಾರ್ ಆ್ಯಂಡ್ ರೆಸ್ಟೊರೆಂಟ್ ನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಕ್ಯಾಶ್ ಕೌಂಟರ್ ನ ಡ್ರಾವರ್ ನಲ್ಲಿಟ್ಟಿದ್ದ 50 ಸಾವಿರ ರೂ. ನಗದು ಕಳವು ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ.
ಈ ಬಗ್ಗೆ ಬಾರ್ ಮಾಲೀಕ ಕರುಣಾಕರ ಶೆಟ್ಟಿ ಪೊಲೀಸರಿಗೆ ದೂರು ನೀಡಿದ್ದಾರೆ. ಡಿ.10ರಂದು ರಾತ್ರಿ ಬಾರ್ ನ ಬಾಗಿಲು ಹಾಕಿ ಹೋಗಿದ್ದು, ಡಿ.11ರಂದು ಬೆಳಿಗ್ಗೆ ಬಂದು ನೋಡುವಾಗ ಯಾರೋ ಕಳ್ಳರು ಬಾರ್ ನ ಹಿಂಬದಿಯ ಗೋಡೆ ಹಾಗೂ ಕಿಟಕಿಯನ್ನು ಒಡೆದು ಒಳಪ್ರವೇಶಿಸಿ, ಕ್ಯಾಶ್ ಕೌಂಟರ್ ನ ಡ್ರಾವರ್ ನಲ್ಲಿಟ್ಟಿದ್ದ 50 ಸಾವಿರ ರೂ. ನಗದನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka