2 ವಿಡಿಯೋ ಬಿಡುಗಡೆ ಮಾಡಿ ಸಿ.ಟಿ.ರವಿ, ಬಿಜೆಪಿ ನಾಯಕರಿಗೆ ಶಾಕ್ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಅವಾಚ್ಯ ಶಬ್ದ ಬಳಕೆ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ತೀವ್ರ ಚರ್ಚೆಗೊಳಗಾಗುತ್ತಿದೆ. ಈ ನಡುವೆ , ನಾನು ಹಾಗೆ ಮಾತನಾಡಿಯೇ ಇಲ್ಲ ಎಂದು ಸಿ.ಟಿ.ರವಿ ವಾದಿಸುತ್ತಿದ್ದಾರೆ. ಸಿ.ಟಿ.ರವಿ ಹಾಗೂ ಬಿಜೆಪಿ ನಾಯಕರ ವಾದಕ್ಕೆ 2 ವಿಡಿಯೋಗಳ ಬಿಡುಗಡೆ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ.
ಸಿ.ಟಿ.ರವಿ ಬಳಸಿದ ಪದದ ವಿಡಿಯೋವನ್ನು ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮಗಳ ಮುಂದೆ ಕೇಳಿಸಿದರು. ಪ್ರತ್ಯೇಕ ಎರಡು ವಿಡಿಯೋಗಳನ್ನ ಬಿಡುಗಡೆ ಮಾಡುವ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ.
ಒಂದು ವಿಡಿಯೋದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೇಲೆ ಅವಾಚ್ಯ ಶಬ್ದ ಬಳಕೆ ಹಾಗೂ ಇನ್ನೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿ ಅವರನ್ನು ಡ್ರಗ್ಸ್ ಅಡಿಟ್ ಎಂದಿರುವ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: