ಅಪಘಾತದಲ್ಲಿ ಗಾಯಗೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆ

26/01/2025
ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸತತ 13 ದಿನಗಳವರೆಗೆ ಆಸ್ಪತ್ರೆಯಲ್ಲಿ ವೈದ್ಯರ ಆರೈಕೆಯ ನಂತರ ಗುಣಮುಖವಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವೈದ್ಯರಿಗೆ ಹಾಗೂ ಆಸ್ಪತ್ರೆಗೆ ಸಿಬ್ಬಂದಿಗೆ ಭಾವನಾತ್ಮಕ ಪತ್ರ ಬರೆದು ಕೃತಜ್ಞತೆ ಸಲ್ಲಿಸಿದ್ದಾರೆ.
ನೀವು ನನ್ನ ಕುಟುಂಬಕ್ಕಿಂತಹ ಕಡಿಮೆಯಿಲ್ಲದಂತೆ ನೋಡಿಕೊಂಡಿದ್ದೀರಿ, ನನಗೆ ಆಸ್ಪತ್ರೆಗಿಂತ ಮನೆಯಂತೆ ಭಾಸವಾಯ್ತು, ನಿಮ್ಮ ಪ್ರಬಲ ಬೆಂಬಲ, ಕಾಳಜಿ, ದಯೆ, ತಾಳ್ಮೆ ಹೃದಯಸ್ಪರ್ಶಿಯಾಗಿತ್ತು. ನಿಮ್ಮ ಪ್ರೋತ್ಸಾಹ ನನಗೆ ಶೀಘ್ರ ಗುಣಮುಖನಾಗಲು ಶಕ್ತಿ ನೀಡಿತು ಎಂದು ವೈದ್ಯರ ಸಿಬ್ಬಂದಿಯ ಪರಿಶ್ರಮಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: