'ಕೈ' ಬಿಟ್ಟು 'ಕಮಲ' ಪಾಳಯ ಸೇರಿದ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮೊಮ್ಮಗ - Mahanayaka
6:25 PM Thursday 16 - October 2025

‘ಕೈ’ ಬಿಟ್ಟು ‘ಕಮಲ’ ಪಾಳಯ ಸೇರಿದ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮೊಮ್ಮಗ

14/02/2024

ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮೊಮ್ಮಗ ವಿಭಾಕರ್‌ ಶಾಸ್ತ್ರಿ ಕಾಂಗ್ರೆಸ್‌ ಪಕ್ಷವನ್ನು ತೊರೆದಿದ್ದಾರೆ. ವಿಭಾಕರ್‌ ಶಾಸ್ತ್ರಿ ಅವರು ಇಂದೇ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.


Provided by

ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಭಾಕರ್‌ ಶಾಸ್ತ್ರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಲೋಕಸಭಾ ಚುನಾವಣೆ ಮುಂದಿರುವುದಂತೆಯೇ ಹಲವು ಹಿರಿಯ ನಾಯಕರು ಪಕ್ಷ ತೊರೆಯುತ್ತಿರುವುದು ಕಾಂಗ್ರೆಸ್‌ ಗೆ ನುಂಗಲಾರದ ತುತ್ತಾಗಿದೆ.

ಈ ಕುರಿತು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಅಡಿಯಲ್ಲಿ ಜೈ ಕಿಸಾನ್ ಅನ್ನು ಈಡೇರಿಸಲು ಸಾಧ್ಯವಾಗುತ್ತದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ‘ಜೈ ಜವಾನ್, ಜೈ ಕಿಸಾನ್’ ದೃಷ್ಟಿಕೋನವನ್ನು ಮತ್ತಷ್ಟು ಬಲಪಡಿಸುವ ಮೂಲಕ ನಾನು ದೇಶಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಎಎನ್ಐಗೆ ತಿಳಿಸಿದರು.

ಇತ್ತೀಚಿನ ಸುದ್ದಿ