2 ವರ್ಷದ ಬಳಿಕ ಸಿಕ್ಕಿ ಬಿದ್ದ ಲ್ಯಾಪ್ ಟಾಪ್ ಕಳ್ಳ: ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದು ಹೇಗೆ ಗೊತ್ತಾ? - Mahanayaka
12:36 PM Tuesday 22 - October 2024

2 ವರ್ಷದ ಬಳಿಕ ಸಿಕ್ಕಿ ಬಿದ್ದ ಲ್ಯಾಪ್ ಟಾಪ್ ಕಳ್ಳ: ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದು ಹೇಗೆ ಗೊತ್ತಾ?

laptop thief
14/06/2024

ಕೊಟ್ಟಿಗೆಹಾರ: ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಶರತ್ ಬಂಧಿತ ಆರೋಪಿಯಾಗಿದ್ದು, ಈತ ಮೂಲತಃ ಮಂಗಳೂರು ಮೂಲದ ನಲ್ಕೆ ಗ್ರಾಮದವನಾಗಿದ್ದಾನೆ. ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ.ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿ ಆರೋಪಿ  ಪರಾರಿಯಾಗಿ ಪೊಲೀಸರಿಗೆ ಚಳ್ಳೇಹಣ್ಣು ತಿಳಿಸಿದ್ದ.

ನಂತರ ಕಳಸದ ಹೆಮ್ಮಕ್ಕಿಯಲ್ಲಿ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಇದ್ದ. ಯಾವುದೇ ಮೊಬೈಲ್ ಬಳಸುತ್ತಿರಲಿಲ್ಲ. ಈಚೆಗೆ ಒಂದು ಸಿಮ್ ಖರೀದಿ ಮಾಡಿದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಕಾರ್ಯಾಚರಣೆಯಲ್ಲಿ ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಚ್.ಸಿ.ರಮೇಶ್ ಕುಮಾರ್, ಸಚಿನ್, ಮೆಹಬೂಬ್, ಮಾಲತೇಶ್, ಚಾಲಕ ಅಶೋಕ್ ಭಾಗವಹಿಸಿದ್ದರು. ಪೊಲೀಸರ ಸಾಧನೆಯನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ