ಒಬ್ಬ ಲಷ್ಕರ್ ಭಯೋತ್ಪಾದಕ ಮಟಾಷ್, ಭದ್ರತಾ ಪಡೆ ಕೈಗೆ ಸಿಕ್ಕಿ ಬಿದ್ದ ಇನ್ನಿಬ್ಬರು ಉಗ್ರರು

ಜಮ್ಮು—ಕಾಶ್ಮೀರ: ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್ ಭಯೋತ್ಪಾದಕನೊಬ್ಬ ಸಾವನ್ನಪ್ಪಿದ್ದು, ಇನ್ನಿಬ್ಬರು ಉಗ್ರರು ಸಿಕ್ಕಿ ಬಿದ್ದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಒಬ್ಬ ಉಗ್ರನನ್ನು ಹತ್ಯೆ ಮಾಡಿದೆ. ಇನ್ನಿಬ್ಬರು ಸಿಕ್ಕಿಬಿದ್ದಿದ್ದಾರೆ. ಮಂಗಳವಾರ ಶೋಪಿಯಾನ್‌ನ ಜಿನ್ ಪಥರ್ ಕೆಲ್ಲರ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆಯಿತು.
ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನವರು ಎಂದು ನಂಬಲಾದ ಮೂವರು ಪಾಕಿಸ್ತಾನಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಅವರ ‘ಭಯೋತ್ಪಾದಕ ಮುಕ್ತ ಕಾಶ್ಮೀರ’ ಪೋಸ್ಟರ್ ಗಳನ್ನು ಭದ್ರತಾ ಪಡೆಗಳು ಶೋಪಿಯಾನ್ ಜಿಲ್ಲೆಯಾದ್ಯಂತ ಹಲವಾರು ಸ್ಥಳಗಳಲ್ಲಿ ಹಾಕಿದೆ. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಇನ್ನೂ ಉಗ್ರರ ಕುರಿತು ಸರಿಯಾದ ಮಾಹಿತಿ ನೀಡುವವರಿಗೆ 20 ಲಕ್ಷ ರೂಪಾಯಿ ಬಹುಮಾನವನ್ನು ಕೂಡ ಘೋಷಿಸಲಾಗಿದೆ. ಪಹಲ್ಗಾಮ್ ನಲ್ಲಿ ಅಮಾಯಕರ ಪ್ರಾಣ ತೆಗೆದವರನ್ನು ಸುಮ್ಮನೆ ಬಿಡಬಾರದು ಎನ್ನುವ ಒತ್ತಡ ಹೆಚ್ಚಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD