ತಡವಾಗಿ ಬಂದ ಬಿರಿಯಾನಿ: ಡೆಲಿವರಿ ಬಾಯ್ ಮೇಲೆ ಹಲ್ಲೆ | ಇಬ್ಬರ ಬಂಧನ

ಬೆಂಗಳೂರು: ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದ ಆಹಾರ ತಡವಾಗಿ ಬಂದಿದ್ದಕ್ಕೆ ಜೊಮ್ಯಾಟೊ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ಧಾರೆ.
ಮುಬಾರಕ್ ಹಾಗೂ ಶಾರೂಕ್ ಬಂಧಿತರು. ಹಲ್ಲೆಗೊಳಗಾದ ಚಾಂದ್ ಎಂಬಾತ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.
ಸೆ.12ರಂದು ರಾತ್ರಿ ಬಾಪುಜಿ ನಗರದ ಬಳಿ ಆರೋಪಿಗಳು ಜ್ಯೊಮೊಟೊನಲ್ಲಿ ಬಿರಿಯಾನಿ ಆರ್ಡರ್ ಮಾಡಿದ್ದರು. ಮಳೆ ಹಿನ್ನೆಲೆಯಲ್ಲಿ ಡೆಲಿವರಿ ಬಾಯ್ ಚಾಂದ್ ತಡವಾಗಿ ಹೋಗಿದ್ದ. ಇದರಿಂದ ಕೆರಳಿದ ಆರೋಪಿಗಳು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು.
ನೀರಿನ ಕ್ಯಾನ್ ನಿಂದ ಹೊಡೆದಿದ್ದರು. ಘಟನೆಯ ವಿಡಿಯೋವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇಬ್ಬರು ಆರೋಪಿಗಳನ್ನ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD