11:09 AM Thursday 4 - December 2025

ಶಾಕಿಂಗ್ ನ್ಯೂಸ್:  ಗ್ಯಾಸ್ ಬೆಲೆ 1 ಸಾವಿರದ ಗಡಿದಾಟುವ ಸಾಧ್ಯತೆ ಇದೆ!

gas
02/09/2021

ಬೆಂಗಳೂರು: ಒಂದೆಡೆ ಕೊರೊನಾ ಸಂಕಷ್ಟದಿಂದ ಜನರು ಆರ್ಥಿಕತೆಯ ಮೂಲವನ್ನೇ ಕಳೆದುಕೊಂಡಿದ್ದಾರೆ. ಇನ್ನೊಂದೆಡೆ ದಿನ ಬಳಕೆ ವಸ್ತುಗಳು ಹಾಗೂ ಇಂಧನ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿವೆ. ನಿನ್ನೆಯಷ್ಟೇ ಅಡುಗೆ ಅನಿಲ ಸಿಲಿಂಡರ್ ಬೆಲೆ 25 ರೂ. ಹೆಚ್ಚಳವಾಗಿದ್ದು, ಗ್ರಾಹಕರಿಗೆ ಬಿಗ್ ಶಾಕ್ ನೀಡಿತ್ತು. ಆದರೆ ಮತ್ತೆ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಮುಂದಿನ 3 ತಿಂಗಳಲ್ಲಿ ಎಲ್ ಪಿಜಿ ಸಿಲಿಂಡರ್ ದರ 1 ಸಾವಿರ ರೂ. ಗಡಿದಾಟುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಸದ್ಯದ ವರದಿಗಳ ಪ್ರಕಾರ, ಈ ಬಗ್ಗೆ ಆಲ್ ಇಂಡಿಯಾ ಎಲ್.ಪಿ.ಜಿ. ಫೆಡರೇಷನ್ ರಾಜ್ಯ ಕಾರ್ಯದರ್ಶಿ ರಮೇಶ್ ಕುಮಾರ್ ಅವರು ಸುಳಿವು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಚಳಿಗಾಲದಲ್ಲಿ ಯುರೋಪ್ ದೇಶಗಳಲ್ಲಿ ಗ್ಯಾಸ್ ಸಿಲಿಂಡರ್ ಬೇಡಿಕೆ ಹೆಚ್ಚುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್.ಪಿ.ಜಿ. ಬೇಡಿಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಭಾರತದಲ್ಲಿಯೂ ದರ ಹೆಚ್ಚಾಗುತ್ತದೆ ಎಂದು ಹೇಳಲಾಗ್ತಿದೆ.  ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಅಡುಗೆ ಅನಿಲ ದರ 25 ರೂಪಾಯಿ ದಿಢೀರ್ ಏರಿಕೆಯಾಗಿ ಗ್ರಾಹಕರ ಬೆನ್ನಿಗೆ ಬರೆ ಎಳೆಯಲಾಗಿದೆ. ಕಳೆದ 15 ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ದರ 50 ರೂಪಾಯಿ ಏರಿಕೆಯಾಗಿದೆ.

ಇನ್ನಷ್ಟು ಸುದ್ದಿಗಳು…

ಮಹಿಳೆ ಜೊತೆಗೆ ಅಕ್ರಮ ಸಂಬಂಧ: ಕಾನ್‌ ಸ್ಟೇಬಲ್‌ ನ  ಕೈ ಕಾಲು ಕಟ್ಟಿ ಹಿಗ್ಗಾಮುಗ್ಗಾ ಥಳಿತ

ಆಟವಾಡುತ್ತಿದ್ದ ಬಾಲಕನ ಮೇಲೆ ಪೈಪ್ ಉರುಳಿಬಿದ್ದು ಬಾಲಕ ಸಾವು!

ಕೈಕೊಟ್ಟ ಕೇಂದ್ರ ಸರ್ಕಾರ: ಈ ಪ್ರಮುಖ 10 ಯೋಜನೆಗಳಿಗೆ ಬಿಡಿಗಾಸೂ ಬಿಡುಗಡೆಯಾಗಿಲ್ಲ!

ಎಣ್ಣೆ ಪಾರ್ಟಿಯ ಬಳಿಕ ಡಬ್ಬಲ್ ಮರ್ಡರ್ | ಸ್ನೇಹಿತರಿಂದಲೇ ನಡೆಯಿತು ದುಷ್ಕೃತ್ಯ!

ನೀರಿನ ಬಾಟಲಿಯೇ ಬೆಂಗಳೂರಿನ ಅಪಘಾತಕ್ಕೆ ಕಾರಣವಾಯ್ತೆ? | ಅಪಘಾತದ ವೇಳೆ ನಡೆದದ್ದೇನು?

ಶಾಶ್ವತ ಸೂರಿಗಾಗಿ ರಸ್ತೆಯಲ್ಲಿ 6 ಕಿ.ಮೀ. ಉದ್ದಂಡ ನಮಸ್ಕಾರ ಹಾಕಿ ದಲಿತ ಮಹಿಳೆಯರು!

ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಫೋಕ್ಸೋ ಪ್ರಕರಣದ ಆರೋಪಿ

ಇತ್ತೀಚಿನ ಸುದ್ದಿ

Exit mobile version