ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡುಗಡೆ: ಕಾರಾಗೃಹದ ಮುಂದೆ ಗುಂಪು ಚದುರಿಸಲು ಲಾಠಿ ಚಾರ್ಜ್

ಬೆಂಗಳೂರು: ಸಂತ್ರಸ್ತೆಯ ಅಪಹರಣ ಆರೋಪದಡಿ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಸೋಮವಾರ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಇದೀಗ ಜೈಲಿಂದ ಅವರು ಬಿಡುಗಡೆಯಾಗಿದ್ದಾರೆ.
ಇನ್ನೂ ರೇವಣ್ಣ ಜೈಲಿನಿಂದ ಬಿಡುಗಡೆಯಾಗುತ್ತಿರುವ ವಿಚಾರ ತಿಳಿದು ರೇವಣ್ಣ ಬೆಂಬಲಿಗರು ಮತ್ತು ನೂರಾರು ಜೆಡಿಎಸ್ ಕಾರ್ಯಕರ್ತರು ಪರಪ್ಪನ ಅಗ್ರಹಾರ ಕಾರಾಗೃಹದ ಮುಂದೆ ಜಮಾಯಿಸಿದ್ದರು. ರೇವಣ್ಣ ಬಿಡುಗಡೆಯಾಗುತ್ತಿದ್ದಂತೆಯೇ ಜಯಕಾರ ಹಾಕಿ ಸಂಭ್ರಮಾಚರಣೆಗೆ ಮುಂದಾಗಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿ, ಗುಂಪು ಚದುರಿಸಿದರು.
ರೇವಣ್ಣ ಅವರಿಗೆ ನ್ಯಾಯಾಲಯ ಸೋಮವಾರವೇ ಷರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನು ನೀಡುವಷ್ಟರಲ್ಲಿ ನ್ಯಾಯಾಲಯದ ಸಮಯ ಆಗಿದ್ದರಿಂದ ಕೋರ್ಟ್ ಪ್ರಕ್ರಿಯೆಗಳು ಇಂದಿಗೆ ಮುಂದೂಡಲಾಗಿತ್ತು. ಹೀಗಾಗಿ ಹೆಚ್.ಡಿ.ರೇವಣ್ಣ ಸೋಮವಾರದ ರಾತ್ರಿಯನ್ನು ಜೈಲಿನಲ್ಲೇ ಕಳೆದರು. ಮಂಗಳವಾರ ಕೋರ್ಟ್ ಪ್ರಕ್ರಿಯೆಗಳು ಮುಗಿದಿದ್ದು, ಇದೀಗ ಜೈಲಿಂದ ಬಿಡುಗಡೆಯಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth