11:57 AM Saturday 24 - January 2026

ಪಂಜಾಬಲ್ಲಿ ಕುಖ್ಯಾತ ಕ್ರಿಮಿನಲ್ ಲಾರೆನ್ಸ್ ಬಿಷ್ಣೋಯ್ ಸಹಚರನ ಬಂಧನ: ಪಿಸ್ತೂಲ್ ವಶ

25/01/2025

ಪಂಜಾಬ್ ನ ಡೇರಾ ಬಸ್ಸಿಯಲ್ಲಿ ನಡೆದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್‌ನ ಸಹಚರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಆರೋಪಿಯನ್ನು ಡೇರಾ ಬಸ್ಸಿ ನಿವಾಸಿ ಮೆಹಫುಜ್ ಅಲಿಯಾಸ್ ವಿಶಾಲ್ ಖಾನ್ ಎಂದು ಗುರುತಿಸಲಾಗಿದೆ. ಪೊಲೀಸ್ ತಂಡಗಳು ಅವನ ಬಳಿಯಿಂದ ಪಿಸ್ತೂಲ್ ಮತ್ತು ಐದು ಕಾರ್ಟ್ರಿಜ್ ಗಳನ್ನು ಸಹ ವಶಪಡಿಸಿಕೊಂಡಿವೆ.

ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಗೌರವ್ ಯಾದವ್, “ಪಂಜಾಬ್ ಪೊಲೀಸರು, ಮೊಹಾಲಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್ ನ ಸಹಚರನನ್ನು ಬಂಧಿಸಿದೆ” ಎಂದಿದೆ.

ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್ ನ ಮತ್ತೊಬ್ಬ ಸದಸ್ಯ ಮಂಜೀತ್ ಡೇರಾ ಬಸ್ಸಿಯಲ್ಲಿ ನಡೆದ ಗುಂಡಿನ ದಾಳಿ ಘಟನೆಯ ಹಿಂದಿನ ಮಾಸ್ಟರ್ ಮೈಂಡ್ ಗಳು ಎಂದು ಡಿಜಿಪಿ ಯಾದವ್ ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version