ಗೋವಾದಲ್ಲಿ ವಕೀಲ ಕೆ.ಎನ್.ಜಗದೀಶ್ ಕುಮಾರ್ ಅರೆಸ್ಟ್!
30/08/2024
ಬೆಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಕೀಲ ಕೆ.ಎನ್.ಜಗದೀಶ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
2022ರಲ್ಲಿ ಜಗದೀಶ್ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಈ ಸಂಬಂಧ ನ್ಯಾಯಾಲಯದಲ್ಲಿ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆದರೆ ಜಗದೀಶ್ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರಂತೆ.
ಕೆ.ಎನ್. ಜಗದೀಶ್ ಕುಮಾರ್ ಗೋವಾದಲ್ಲಿರುವ ಖಚಿತ ಮಾಹಿತಿ ಹಿನ್ನೆಲೆ ಗೋವಾಕ್ಕೆ ತೆರಳಿದ ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆತರಲಿದ್ದಾರೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth