ಮೂರು ತಿಂಗಳು ಕೆಟ್ಟದ್ದನ್ನ ನೋಡಲ್ಲ, ಕೇಳಲ್ಲ, ಮಾತಾಡಲ್ಲ: ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ - Mahanayaka

ಮೂರು ತಿಂಗಳು ಕೆಟ್ಟದ್ದನ್ನ ನೋಡಲ್ಲ, ಕೇಳಲ್ಲ, ಮಾತಾಡಲ್ಲ: ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

laxmi hebbalkar
05/02/2023

ಚಿಕ್ಕಮಗಳೂರು : ಮೂರು ತಿಂಗಳು ಕೆಟ್ಟದ್ದನ್ನ ನೋಡಲ್ಲ, ಕೇಳಲ್ಲ, ಮಾತಾಡಲ್ಲ, ಈ ಬಾರಿ ಬಹಳ ತಾಳ್ಮೆಯಿಂದ ಎಲೆಕ್ಷನ್ ಮಾಡ್ಬೇಕು ಅನ್ಕೊಂಡಿದ್ದೀನಿ ಎಂದು  ಮೂಡಿಗೆರೆ ತಾಲೂಕಿನ ಹಾಂದಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.

ಸಿಡಿ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಮಾಧ್ಯಮದವರಿಗೆ ವಿನಂತಿ ಕೂಡ ಮಾಡಿದ್ದೇನೆ.  ಮೂರು ತಿಂಗಳು ತಾಳ್ಮೆಯಿಂದ ನಾನು ಮಾಡಿದ ಕೆಲಸದಿಂದ ಗೆಲ್ಲಬೇಕಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವನ್ನ ಅಧಿಕಾರಕ್ಕೆ ತರಬೇಕಿದೆ. ಮಹಿಳೆಯರ ಪರವಾದ ಸರ್ಕಾರವನ್ನ ನಾವು ರೂಪಿಸಬೇಕಿದೆ. ನಾನು ತುಂಬಾ ತಾಳ್ಮೆಯಿಂದ ಇರಲು ಬಯಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಕುಮಾರಸ್ವಾಮಿ ಹೇಳಿಕೆ ಬಗ್ಗೆ ನಾನು ನೋಡೂ ಇಲ್ಲ, ಕುಮಾರಸ್ವಾಮಿ ಅಣ್ಣನ ಬಗ್ಗೆ ತುಂಬಾ ಗೌರವ ಇದೆ,  ಅವರು ಯಾವ ಮೂಲದಿಂದ ಹೇಳಿದ್ದಾರೆ ಗೊತ್ತಿಲ್ಲ, ಅದಕ್ಕೆ ನಾನು ಪ್ರತಿಕ್ರಿಯೇ ನೀಡೋದು ಸರಿಯಲ್ಲ ಎಂದು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ