Leelavathi No More: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಇನ್ನಿಲ್ಲ

leelavathi no more
08/12/2023

ಸ್ಯಾಂಡಲ್ ವುಡ್ ಹಿರಿಯ ನಟಿ ಲೀಲಾವತಿ ಅವರು  ಹಲವು ಸಮಯಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಇಂದು ಕೊನೆಯುಸಿರೆಳೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 1938ರಲ್ಲಿ ಜನಿಸಿದ್ದ ಲೀಲಾವತಿ ಅವರು,  ಸಣ್ಣ ವಯಸ್ಸಿನಲ್ಲೇ ರಂಗ ಭೂಮಿಯಲ್ಲಿ ಆಸಕ್ತಿ ಹೊಂದಿದ್ದರು. ಮೈಸೂರು ರಂಗಭೂಮಿಯಿಂದ ವೃತ್ತಿ ಜೀವನ ಆರಂಭಿಸಿದ್ದರು.

ಸ್ಯಾಂಡಲ್ ವುಡ್ ಮೇರು ನಟರೊಂದಿಗೆ ಅಭಿನಯಿಸಿದ ಲೀಲಾವತಿ ಅವರು,  ಕನ್ನಡ, ತಮಿಳು, ತೆಲುಗು ಚಿತ್ರಗಳು ಸೇರಿದಂತೆ ಸುಮಾರು 600 ಸಿನಿಮಾಗಳಲ್ಲಿ  ನಟಿಸಿದ್ದು, ಅಪಾರ ಅಭಿಮಾನಿಗಳನ್ನು ಹೊಂದಿದ್ದರು.

ಹಲವು ಸಮಯಗಳಿಂದ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಲೀಲಾವತಿ ಅವರು, ತಮ್ಮ 85ನೇ ವರ್ಷದಲ್ಲಿ ಜೀವನ ಪಯಣ ಮುಗಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version