ಬಾಲಕಿಯ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ, ಮತ್ತೊಂದು ಊರಲ್ಲಿ ಮಲಗಿದ್ದ ರೈತನ ಮೇಲೆ ದಾಳಿ ಮಾಡಿದ ಚಿರತೆ!
ಚಾಮರಾಜನಗರ: ಬಾಲಕಿ ಮೇಲೆ ಚಿರತೆ ದಾಳಿ ನಡೆದ ಪ್ರಕರಣದ ಮರುದಿನವೇ ಮತ್ತೊಂದು ಊರಲ್ಲಿ ರೈತನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕಂಚಗಳ್ಳಿ ಗ್ರಾಮದಲ್ಲಿ ನಡೆದಿದೆ.
ಕಂಚಗಳ್ಳಿ ಗ್ರಾಮದ ನಂಜಪ್ಪ ಎಂಬವರು ಚಿರತೆ ದಾಳಿಯಿಂದ ಪಾರಾಗಿರುವ ರೈತ. ಜೋಳದ ಫಸಲನ್ನು ಕಾಯಲು ಜಮೀನಿನಲ್ಲಿ ಮೊಬೈಲ್ ಹಿಡಿದು ಮಲಗಿದ್ದ ವೇಳೆ ಚಿರತೆ ಬಂದು ಪರಚಿದ್ದು ಕಾಡು ಬೆಕ್ಕಿರಬೇಕೆಂದು ಬೇಡ್ ಶೀಟ್ ಸಮೇತ ಒದರಿದಾಗ ಚಿರತೆ ಎಂದು ಗೊತ್ತಾಗಿದೆ. ಕೂಡಲೇ, ಎಚ್ಚೆತ್ತ ನಂಜಪ್ಪ ಕೋಲು ಹಿಡಿದು ಅರಚಿದಾಗ ಚಿರತೆ ಪರಾರಿಯಾಗಿದೆ.
ಇನ್ನು, ನಂಜಪ್ಪಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕಾಮಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಸೋಮವಾರ ರಾತ್ರಿ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ನಡೆಸಿ 200 ಮೀ. ವರೆಗೆ ಎಳೆದೊಯ್ದಿತ್ತು. ಬಳಿಕ, ಜನರ ಕಿರುಚಾಟ ಕೇಳಿ ಪರಾರಿಯಾಗಿತ್ತು.ಈಗ ಮತ್ತದೇ ರೀತಿ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























