11 ವರ್ಷದ ಬಾಲಕನ ಮೇಲೆ ಚಿರತೆ ದಾಳಿ | ವಾರದ ಹಿಂದೆಯಷ್ಟೇ ಬಾಲಕಿಯ ಬಲಿ ಪಡೆದಿದ್ದ ಚಿರತೆ!
ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಾರದ ಹಿಂದೆಯಷ್ಟೇ ಚಿರತೆ ದಾಳಿ(Leopard attacks) ಗೆ 5 ವರ್ಷದ ಬಾಲಕಿಯೊಬ್ಬಳು ಬಲಿಯಾಗಿದ್ದಳು. ಇದೀಗ 11 ವರ್ಷದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಳಿಸಿದೆ.
ಚಿಕ್ಕಮಗಳೂರು(Chikmagalur) ಜಿಲ್ಲೆಯ ತರೀಕೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೃದಯ್(11) ಮೇಲೆ ಚಿರತೆಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ.
ಇದನ್ನೂ ಓದಿ: ಮನೆಯ ಹಿಂದೆಯೇ 5 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ: ಕಾಡಿನಲ್ಲಿ ಪತ್ತೆಯಾಯ್ತು ಮೃತದೇಹ!
ಹೃದಯ್ ತನ್ನ ಮನೆಯ ಬಳಿ ನಿಂತಿದ್ದ ವೇಳೆ ಹೊಂಚು ಹಾಕಿ ಕುಳಿತಿದ್ದ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದೆ. ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಸ್ಥಳೀಯರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಲಿಂಗದಹಳ್ಳಿ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಈ ಘಟನೆ ನಡೆದಿದೆ. ವಾರದ ಅಂತರದಲ್ಲಿ ಚಿರತೆ ದಾಳಿ ನಡೆಸಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಮಕ್ಕಳನ್ನೇ ಗುರಿಯಾಗಿಸಿ ಚಿರತೆ ದಾಳಿ ನಡೆಸುತ್ತಿರುವುದು ಪೋಷಕರಿಗೆ ಆತಂಕವನ್ನುಂಟು ಮಾಡಿದೆ. ಅರಣ್ಯ ಇಲಾಖೆ ಇನ್ನಾದರೂ ಚಿರತೆಯನ್ನು ಸ್ಥಳಾಂತರಿಸಲು ಕ್ರಮಕೈಗೊಳ್ಳುತ್ತಾ ಕಾದು ನೋಡಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























