ಮನೆಯ ಹಿಂದೆಯೇ 5 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ: ಕಾಡಿನಲ್ಲಿ ಪತ್ತೆಯಾಯ್ತು ಮೃತದೇಹ!
ಚಿಕ್ಕಮಗಳೂರು: 5 ವರ್ಷದ ಬಾಲಕಿಯ ಮೇಲೆ ಚಿರತೆಯೊಂದು ದಾಳಿ ನಡೆಸಿ, ಕಾಡಿಗೆ ಎಳೆದೊಯ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮುಂಡ್ರೆ ಸಮೀಪದ ನವಿಲೇಕಲ್ ಗುಡ್ಡ ಗ್ರಾಮದಲ್ಲಿ ನಡೆದಿದೆ.
ಚಿರತೆ ದಾಳಿಗೊಳಗಾದ 5 ವರ್ಷದ ಸಾನ್ವಿ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಮನೆಯ ಹಿಂದೆಯೇ ಹೊಂಚು ಹಾಕಿದ್ದ ಚಿರತೆ ಕೊಟ್ಟಿಗೆ ಸಮೀಪದಲ್ಲಿದ್ದ ಬಾಲಕಿಯ ಮೇಲೆ ದಾಳಿ ನಡೆಸಿದೆ, ಬಾಲಕಿಯ ಕಿರುಚಾಟ ಕೇಳಿ ಮನೆಯವರು ಓಡಿ ಬಂದ ವೇಳೆ ಬಾಲಕಿನ್ನು ಕಾಡಿನತ್ತ ಎಳೆದೊಯ್ದಿದೆ.
ತಕ್ಷಣವೇ ಬಾಲಕಿಯ ಪೋಷಕರು ಸ್ಥಳೀಯರ ಸಹಕಾರದೊಂದಿಗೆ ಹುಡುಕಾಟ ನಡೆಸಿದ್ದು, ಈ ವೇಳೆ ಬಾಲಕಿಯ ಮೃತದೇಹ ಕಾಡಂಚಿನಲ್ಲಿ ಪತ್ತೆಯಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದ ಸ್ಥಳೀಯರ ಬೆಚ್ಚಿಬಿದ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























