ಚಾಮರಾಜನಗರದಲ್ಲಿ ಮತ್ತೆ ಬಾಲಕನ ಮೇಲೆ ಚಿರತೆ ದಾಳಿ

chamarajanagara
26/07/2023

ಚಾಮರಾಜನಗರ: ಬಾಲಕಿ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅದೇ ರೀತಿ ಘಟನೆ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿಯಲ್ಲಿ ಬಾಲಕನ ಮೇಲೆ ಚಿರತೆ ದಾಳಿ  ನಡೆಸಿ ಗಾಯಗೊಳಿಸಿದೆ.

ಮಲ್ಲಿಗೆಹಳ್ಳಿ ಗ್ರಾಮದ ಹರ್ಷಿತ್(09) ದಾಳಿಗೊಳಗಾದ ಬಾಲಕ. ಗ್ರಾಮದ ಪ್ರಾಥಮಿಕ ಶಾಲೆ ಮುಂಭಾಗದಿಂದ ಮನೆಗೆ ತೆರಳುವಾಗ ಅವಿತು ಕುಳಿತಿದ್ದ ಚಿರತೆ ದಾಳಿ ಮಾಡಿದ್ದು ಇದನ್ನು ಕಂಡ ಜನರು ಚೀರಾಟಿ ಕೂಗಾಡಿದ್ದಾರೆ. ಜನರ ಕಿರುಚಾಟಕ್ಕೆ ಬೆದರಿದ ಚಿರತೆ ಬಾಲಕನ್ನು ಬಿಟ್ಟು ಗದ್ದೆಗಳತ್ತ ಓಡಿದೆ.

ಹರ್ಷಿತ್ ನ ಮುಖ, ಗಂಟಲು, ಕಾಲು, ಹೊಟ್ಟೆಯ ಭಾಗಕ್ಕೆ ಚಿರತೆ ಗೀರಿ ಕಚ್ಚಿ ಗಾಯಗೊಳಿಸಿದ್ದು ಯಳಂದೂರು ಆಸ್ಪತ್ರೆಯಲ್ಲಿ ಬಾಲಕನಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ.

4 ದಿನಗಳಿಂದ ಓಡಾಟ ನಡೆಸಿದ್ದ ಚಿರತೆ:

ಕಳೆದ ಮೂರು ದಿನಗಳಿಂದ ಯಳಂದೂರು ತಾಲೂಕಿನ ಕೆಸ್ತೂರು, ಮಲ್ಲಿಗಹಳ್ಳಿ, ಕಟ್ನವಾಡಿ, ಹೊಸೂರು ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಹಾಗಾಗಿ ಅರಣ್ಯ ಇಲಾಖೆ ಮಲ್ಲಿಗೆಹಳ್ಳಿ ಸೇರಿದಂತೆ 6 ಕಡೆ  ಬೋನುಗಳನ್ನು ಇಟ್ಟು  ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಆದರೆ, ಚಿರತೆ ಸೆರೆಯಾಗದೇ ಬಾಲಕನ ಮೇಲೆ ಎರಗಿದ ಆತಂಕಕಾರಿ ಘಟನೆ ನಡೆದಿದೆ.

ಕೆಲವು ದಿನಗಳ ಹಿಂದೆಯಷ್ಟೇ   ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಮನೆ ಮುಂದೆ ಆಟ ಆಡುತ್ತಿದ್ದ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿತ್ತು.‌ ಬಾಲಕಿ 15 ದಿನಗಳ ಕಾಲ ಚಿಕಿತ್ಸೆ ಪಡೆದರೂ ಫಲಕಾರಿಯಾಗದೇ ಅಸುನೀಗಿದ್ದಳು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version