ಕಳಸ: ತೋಟದ ಪಕ್ಕ ಚಿರತೆ ಮರಿಗಳು ಪ್ರತ್ಯಕ್ಷ; ಸ್ಥಳೀಯರಲ್ಲಿ ತೀವ್ರ ಆತಂಕ, ಅರಣ್ಯ ಇಲಾಖೆ ಎಚ್ಚರಿಕೆ
ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ವ್ಯಾಪ್ತಿಯ ಗುಮ್ಮನ್ ಖಾನ್ ಬಳಿಯ ಖಾಸಗಿ ತೋಟದ ಪಕ್ಕದಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ತೋಟದ ಸಮೀಪವೇ ಮರಿಗಳು ಕಂಡುಬಂದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ತೋಟದ ಕಾರ್ಮಿಕರಲ್ಲಿ ತೀವ್ರ ಆತಂಕ ವಾತಾವರಣ ನಿರ್ಮಾಣವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕಳಸ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಿಗಳನ್ನು ತಾಯಿ ಚಿರತೆಯೊಂದಿಗೆ ಮರುಸಂಪರ್ಕ ಕಲ್ಪಿಸಲು (ಒಟ್ಟುಗೂಡಿಸಲು) ಅಗತ್ಯ ಕ್ರಮಗಳನ್ನು ಕೈಗೆತ್ತಿಕೊಂಡಿದ್ದಾರೆ.
ತಾಯಿ ಚಿರತೆಯು ಮರಿಗಳನ್ನರಸಿ ಬರುವ ಸಾಧ್ಯತೆ ಇರುವುದರಿಂದ ತೋಟದ ಸುತ್ತಮುತ್ತ ಯಾರೂ ಓಡಾಡದಂತೆ ಅರಣ್ಯ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.
ತಾಯಿ ಚಿರತೆ ಮತ್ತು ಮರಿಗಳನ್ನು ಸುರಕ್ಷಿತವಾಗಿ ಒಂದಾಗಿಸುವ ಪ್ರಕ್ರಿಯೆಗೆ ಗ್ರಾಮಸ್ಥರು ಪೂರ್ಣ ಸಹಕಾರ ನೀಡಬೇಕೆಂದು ಕಳಸ ಅರಣ್ಯ ಸಿಬ್ಬಂದಿ ಸುತ್ತಲಿನ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ತೋಟದ ಕಾರ್ಮಿಕರು ಕೆಲಸ ಮಾಡುವಾಗ ಅತೀವ ಎಚ್ಚರಿಕೆಯಿಂದ ಇರುವಂತೆ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.
ಪ್ರಸ್ತುತ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD




























