ಹುಲಗಿನ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆ ಪ್ರತ್ಯಕ್ಷ - Mahanayaka

ಹುಲಗಿನ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆ ಪ್ರತ್ಯಕ್ಷ

chamarajanagara
17/12/2022

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹಾಗೂ ಚಾಮರಾಜನಗರ ತಾಲೂಕಿನ‌ ಕಿಲಗೆರೆ ಸಮೀಪವಿರುವ ಹುಲಗಿನ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಬೆಟ್ಟಕ್ಕೆ ಹೋಗುವ ಭಕ್ತಾದಿಗಳು ಹಾಗೂ ದನಗಾಹಿಗಳು ಭಯಭೀತರಾಗಿದ್ದಾರೆ.

ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮಕ್ಕೆ ಹೊಂದಿಕೊಂಡಿರುವ ವೆಂಕಟರಮಣ ಸ್ವಾಮಿ ಬೆಟ್ಟದಲ್ಲಿ ಕಳೆದ ಒಂದಷ್ಟು ದಿನಗಳಿಂದ ಚಿರತೆ ಓಡಾಡುತ್ತಿದ್ದು, ಶುಕ್ರವಾರ ಸಂಜೆ ಬೆಟ್ಟಕ್ಕೆ ತೆರಳುತ್ತಿದ್ದ ಸಿಬ್ಬಂದಿಯೊಬ್ಬರ ಕಣ್ಣಿಗೆ ಕಂಡಿದೆ.

ಇದಲ್ಲದೇ ಕಳೆದ ಮೂರು ನಾಲ್ಕು ದಿನಗಳ ಹಿಂದೆ ಗ್ರಾಮದ ಹುಲಗಾದ್ರಿನಾಯ್ಕ ಎಂಬುವವರಿಗೆ ಸೇರಿದ ಕುರಿಯ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದು, ದನಗಾಹಿಗಳು ಬೆಟ್ಟದ ತಪ್ಪಲಿಗೆ ತಮ್ಮ ಜಾನುವಾರು ಮೇಯಿಸಿಕೊಂಡು ಬರಲು ಹೋಗಲು ಹಿಂದೇಟು ಹಾಕುತ್ತಿದ್ದಾರೆ.

ಭಕ್ತಾದಿಗಳು ದೇವರಿಗೆ ಪೂಜೆ ಸಲ್ಲಿಸಲು ಮುಂಜಾನೆ, ರಾತ್ರಿ ವೇಳೆ ದ್ವಿ ಚಕ್ರ ವಾಹನಗಳಲ್ಲಿ ತೆರಳುತ್ತಿದ್ದು, ಈಗ ಅವರಿ ಕೂಡಾ ಭಯಬಿದ್ದಿದ್ದಾರೆ.

ಆದ್ದರಿಂದ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಟ್ಟದ ತಪ್ಪಲಿನಲ್ಲಿ ಬೋನ್ ಇಟ್ಟು ಚಿರತೆಯನ್ನು ಸೆರೆಹಿಡಿಯುಂತೆ ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ