ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ವಾಕಿಂಗ್: ವಾಹನ ಸವಾರರಿಗೆ ಆತಂಕ
11/01/2025
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮಿತಿ ಮೀರಿ ಹೋಗಿದೆ ಇಷ್ಟು ದಿನ ಕಾಡಾನೆ, ಕಾಡುಕೋಣ, ಹುಲಿ ದಾಳಿ ಅಂತ ಬೇಸತ್ತಿದ ಜನ ಇದೀಗ ಚಿರತೆಗೆ ಭಯಪಡುವಂತಾಗಿದೆ.
ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು ಸ್ಥಳೀಯರಲ್ಲಿ ಹಾಗೂ ವಾಹನ ಸವಾರರಲ್ಲಿ ಆತಂಕ ಸೃಷ್ಟಿಸಿದೆ. ಹೀಗಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: