ಕುಮಾರಸ್ವಾಮಿ ಮುಸಲ್ಮಾನರನ್ನು ಸಿಎಂ ಮಾಡಿಕೊಳ್ಳಲಿ: ಸಚಿವ ಡಾ.ಕೆ.ಸುಧಾಕರ್

ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಮಾತಿಗೆ ಪ್ರತಿಕ್ರಿಯೆ ನೀಡಬೇಕಿಲ್ಲ. ಆದರೆ ಅವರಿಗೆ ತಾಕತ್ತಿದ್ದರೆ ಮುಸಲ್ಮಾನರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಸಚಿವ ಡಾ.ಕೆ.ಸುಧಾಕರ್ ಸವಾಲೆಸೆದರು.
ಬಿಜೆಪಿ ಪ್ರಣಾಳಿಕೆ ಅಭಿಯಾನ ಸಮಿತಿಯ ಮೊದಲ ಸಭೆ ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ಮಾತು ಅಗತ್ಯವೇ ಇರಲಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಉತ್ತಮ ಆಡಳಿತಗಾರರು. ಬಿಜೆಪಿಯು ಕುಮಾರಸ್ವಾಮಿಯವರ ಸಲಹೆ ಕೇಳುವುದಿಲ್ಲ ಎಂದರು.
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿ.ಎಂ.ಇಬ್ರಾಹಿಂ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೆಡಿಎಸ್‌ನಿಂದ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ. ಅವರು ಬಿಜೆಪಿಗೆ ಸವಾಲು ಹಾಕುವ ಮುನ್ನ, ಅವರಿಗೆ ಅವರೇ ಸವಾಲು ಹಾಕಿಕೊಳ್ಳಲಿ ಎಂದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕಾಗಿಯೇ ಜೀವಿಸುತ್ತಿದ್ದಾರೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw