ನಳಿನ್ ಕುಮಾರ್ ಕಟೀಲ್ ಗೆ ಸ್ಥಾನಮಾನ ಸಿಗಲಿ:  ಡಿ.ಕೆ.ಶಿವಕುಮಾರ್ ಪ್ರಾರ್ಥನೆ - Mahanayaka
9:31 AM Wednesday 20 - August 2025

ನಳಿನ್ ಕುಮಾರ್ ಕಟೀಲ್ ಗೆ ಸ್ಥಾನಮಾನ ಸಿಗಲಿ:  ಡಿ.ಕೆ.ಶಿವಕುಮಾರ್ ಪ್ರಾರ್ಥನೆ

d k shivakumar
06/04/2025


Provided by

ಕಾಸರಗೋಡು:  ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದರು.

ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಒಂದೇ ವೇದಿಕೆಯಲ್ಲಿ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್,  ನನ್ನ ಮಿತ್ರ, ಮಾಜಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಇದ್ದಾರೆ. ಅವರು ಮಾಜಿ ಅಂದುಕೊಳ್ಳೋದು ಬೇಡ, ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾನೆ, ಝೀರೋ ಹೀರೋ ಆಗುತ್ತಾನೆ. ನಾನು ಮತ್ತು ನೀವು ಒಂದೇ ವೇದಿಕೆಯಲ್ಲಿ ದೇವರನ್ನ ಪ್ರಾರ್ಥನೆ ಮಾಡಿದ್ದೇವೆ. ಭಗವಂತ ನಿಮ್ಮ ಎಲ್ಲಾ ವಿಘ್ನ ನಿವಾರಣೆ ಮಾಡಿ ಮತ್ತೆ ಈ ರಾಜ್ಯದಲ್ಲಿ ಸೇವೆ ಮಾಡುವ ಅವಕಾಶ ಕೊಡಲಿ. ಮತ್ತೆ ನಿಮಗೆ ಅವಕಾಶ ಸಿಗಲಿ ಅಂತ ನಾನೂ ಕೂಡ ಪ್ರಾರ್ಥನೆ ಮಾಡುತ್ತೇನೆ ಎಂದರು.

ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ಸಂಸದರಾಗಿ ಸ್ಪರ್ಧಿಸುವ ಅವಕಾಶವನ್ನು ಕಳೆದುಕೊಂಡಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಟಿಕೆಟ್ ವಂಚಿತರಾಗಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ