LG ಕಂಪನಿಯಿಂದ 2 ಲಕ್ಷ ರೂ. ವರೆಗೆ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ - Mahanayaka
7:45 PM Monday 15 - September 2025

LG ಕಂಪನಿಯಿಂದ 2 ಲಕ್ಷ ರೂ. ವರೆಗೆ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

lg scholarship program
14/10/2024

LG ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ಪದವಿ ಮತ್ತು ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ 2 ಲಕ್ಷ ರೂಪಾಯಿಯವರೆಗೆ ವಿದ್ಯಾರ್ಥಿ ವೇತನ(LG Scholarship Program 2024)ವನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.


Provided by

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲಿ ಎಂಬ ಉದ್ದೇಶದಿಂದ Life’s Good Scholarship ಎಂಬ ಹೆಸರಿನಲ್ಲಿ ಆರ್ಥಿಕ ಸಹಾಯಧನವನ್ನು ನೀಡಲು ರೂ. 2 ಲಕ್ಷವರೆಗೆ ವಿದ್ಯಾರ್ಥಿವೇತನ ನೀಡುತ್ತಿದೆ. ಈ ವಿದ್ಯಾರ್ಥಿ ವೇತನಕ್ಕೆ ಯಾವೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು? ಅರ್ಜಿ ಹೇಗೆ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ವಿದ್ಯಾರ್ಥಿ ವೇತನದ ವಿವರ:

* ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅಡಿಯಲ್ಲಿ ಟ್ಯೂಷನ್ ಫೀಸ್ ನ ಶೇ. 50ರಷ್ಟು ಹಣ ಅಥವಾ 1 ಲಕ್ಷ ರೂ. ಹಣ, ವಿದ್ಯಾರ್ಥಿ ವೇತನ ನೀಡಲಾಗುವುದು.

* ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅಡಿಯಲ್ಲಿ ಟ್ಯೂಷನ್ ಫೀಸ್ ನ ಶೇ. 50ರಷ್ಟು ಹಣ ಅಥವಾ 2 ಲಕ್ಷ ರೂ. ಹಣ, ವಿದ್ಯಾರ್ಥಿ ವೇತನ ನೀಡಲಾಗುವುದು.

ಅರ್ಹತೆಗಳೇನು?

ಈ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಓದುತ್ತಿರಬೇಕು. 12ನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು. ಇದರ ಜೊತೆಗೆ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 8 ಲಕ್ಷ ರೂ. ಒಳಗೆ ಇರಬೇಕು.

ಬೇಕಾಗುವ ದಾಖಲಾತಿಗಳು:

* ವಿದ್ಯಾರ್ಥಿಯ 12ನೇ ತರಗತಿಯ ಅಂಕಪಟ್ಟಿ

* ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ

* ಕಾಲೇಜು ಪ್ರವೇಶಾತಿ ಪತ್ರ

* ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್

* ಪಾಸ್ ಪೋರ್ಟ್ ಸೈಜ್ ಫೋಟೋ

ಈ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳು 31 ಅಕ್ಟೋಬರ್ 2024ರ ಒಳಗಾಗಿ ಕೆಳಗಿನ ಲಿಂಕ್ ಮುಕಾಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಲಿಂಕ್ :  https://www.buddy4study.com/page/life-s-good-scholarship-program


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ