“ಗ್ರಂಥಾಲಯಗಳು ಮಾಹಿತಿ ಮತ್ತು ಸಂವಹನದ ಕೇಂದ್ರಗಳಾಗಬೇಕು”- ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹೆಚ್.ವಿ.ಇಬ್ರಾಹಿಂಪುರ ಅಭಿಮತ.

ಮಂದರ್ತಿ::: ಸ್ಥಳೀಯ ಹಂತದಲ್ಲಿ ಓದುವ ಹವ್ಯಾಸ ಬೆಳೆಸುವ ನಿಟ್ಟಿನಲ್ಲಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯುವ ಜನಾಂಗವನ್ನು ಸಿದ್ಧಪಡಿಸುವ ದಿಸೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹೆಚ್.ವಿ. ಇಬ್ರಾಹಿಂಪುರ ಅವರು ತಿಳಿಸಿದ್ದಾರೆ .
ಮಂದರ್ತಿ ಸಮೀಪದ ಹೆಗ್ಗುಂಜೆ ಗ್ರಾಮ ಪಂಚಾಯತ್ ನಲ್ಲಿ ಜರುಗಿದ ಗ್ರಂಥಾಲಯ ಮೇಲ್ವಿಚಾರಕರ ಜಿಲ್ಲಾಮಟ್ಟದ ಪುನಶ್ಚೇತನ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು ಗ್ರಾಮ ಪಂಚಾಯತ್ ಮೂಲಕ ದೊರೆಯುವ ಸೌಲಭ್ಯಗಳನ್ನು ನಾಗರಿಕರಿಗೆ ಮಾಹಿತಿ ತಲುಪಿಸುವ ಹಂತದಲ್ಲಿ ಗ್ರಾಮಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರು ಕ್ರಿಯಾಶೀಲವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಬ್ರಹ್ಮಾವರ ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಿನ ಗ್ರಾಮ ಪಂಚಾಯತ್ ಗಳು ಡಿಜಿಟಲ್ ಗ್ರಂಥಾಲಯಗಳಾಗಿದ್ದು ಆಧುನಿಕ ವ್ಯವಸ್ಥೆಗಳನ್ನು ಹೊಂದಿವೆ.ಶಿಕ್ಷಣ ಫೌಂಡೇಶನ್ ಸಹಯೋಗದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನತೆಯನ್ನು ಗ್ರಂಥಾಲಯ ಗಳತ್ತ ಆಕರ್ಷಿಸಲು ಆದ್ಯತೆ ನೀಡಿ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಕಾಡೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್.ಕೆ. ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧೀನದಲ್ಲಿ ಗ್ರಂಥಾಲಯಗಳಿಗೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ಶಿಕ್ಷಣ ಫೌಂಡೇಶನ್ ಉತ್ತಮ ಸಹಭಾಗಿತ್ವವನ್ನು ನೀಡುತ್ತಿದ್ದು ಗ್ರಾಮ ಪಂಚಾಯತ್ ಗ್ರಂಥಾಲಯಗಳನ್ನು ಸ್ಪರ್ಧಾತ್ಮಕವಾಗಿ ಅಭಿವೃದ್ಧಿ ಪಡಿಸಲು ಪ್ರೇರಣೆ ನೀಡುತ್ತಿರವುದು ಅಭಿನಂದನೀಯ ಎಂದು ತಿಳಿಸಿದರು.
ಇಲಾಖೆಯ ಆಶಯಗಳು ಪರಿಣಾಮಕಾರಿಯಾಗಿ ಅನುಷ್ಠಾನ ವಾಗಬೇಕಾದರೆ ಮೇಲ್ವಿಚಾರಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಕಾರ್ಯಕ್ರಮದ ಆತಿಥ್ಯ ವಹಿಸಿದ್ದ ಹೆಗ್ಗುಂಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ಶೆಟ್ಟಿ ಅವರು ಮಾತನಾಡಿ ತಂತ್ರಜ್ಞಾನದ ಹೊಸತನವನ್ನು ಸುಲಭವಾಗಿ ಮಾಹಿತಿ ನೀಡುವ ಸಾಧನವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಹೆಗ್ಗುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ. ಬಿ.ಶೆಟ್ಟಿ, ಶಿಕ್ಷಣ ಫೌಂಡೇಶನ್ ಸಂಯೋಜಕಿ ರೀನಾ ಹೆಗ್ಡೆ, ಕಾರ್ಯದರ್ಶಿ ಸುರೇಶ್, ಶಿಕ್ಷಣ ಫೌಂಡೇಶನ್ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಪಂಚಾಯತ್ ಗಳ ಗ್ರಂಥಾಲಯ ಮೇಲ್ವಿಚಾರಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರೀನಾ ಹೆಗ್ಡೆ ಸ್ವಾಗತಿಸಿದರು. ಆಶಾ ಕಾರ್ಯಕ್ರಮ ನಿರೂಪಿಸಿದರು. ಮತದಾನ ಜಾಗೃತಿ ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವನ್ನೂ ಈ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw