₹35,200 ರೂ. ಸಂಬಳ: LICಯಲ್ಲಿದೆ ಭರ್ಜರಿ ಉದ್ಯೋಗ: ಅರ್ಜಿ ಸಲ್ಲಿಸುವುದು ಹೇಗೆ? - Mahanayaka

₹35,200 ರೂ. ಸಂಬಳ: LICಯಲ್ಲಿದೆ ಭರ್ಜರಿ ಉದ್ಯೋಗ: ಅರ್ಜಿ ಸಲ್ಲಿಸುವುದು ಹೇಗೆ?

lic
28/07/2024


Provided by

ಭಾರತ ದೇಶದಲ್ಲಿ ಮನೆಮನೆಯಲ್ಲು ಮಾತಾಗಿರುವ ಅತಿ ದೊಡ್ಡ ಸಂಸ್ಥೆಯಾಗಿರುವ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 200 ಕಿರಿಯ ಸಹಾಯಕ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಕಿರಿಯ ಸಹಾಯಕ ಹುದ್ದೆಗಳಿಗೆ ಯಾವ ಅಭ್ಯರ್ಥಿಗಳ ಅರ್ಜಿ ಸಲ್ಲಿಸಬಹುದು? ಅರ್ಜಿ ಹೇಗೆ ಸಲ್ಲಿಸಬೇಕು ಎಂಬ ಮಾಹಿತಿ ಸೇರಿದಂತೆ ಇತರೆ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಂತೆ ಇಲ್ಲಿ ತಿಳಿಸಲಾಗಿದೆ.

LIC Junior Assistant Recruitment 2024– ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ಒಟ್ಟು 200 ಕಿರಿಯ ಸಹಾಯಕ ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ 38 ಹುದ್ದೆಗಳನ್ನು ಕರ್ನಾಟಕ ರಾಜ್ಯಕ್ಕೆ ಮೀಸಲಿಡಲಾಗಿದೆ. ಕನ್ನಡಿಗರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಪ್ರತಿಯೊಬ್ಬರು ಇದರ ಸದುಪಯೋಗಪಡಿಸಿಕೊಳ್ಳಿ.

 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು :

* ಶೈಕ್ಷಣಿಕ ಅರ್ಹತೆಗಳು: ಅರ್ಜಿ ಸಲ್ಲಿಸುವರು ಪದವಿ ಶಿಕ್ಷಣ ಪೂರ್ಣಗೊಳಿಸಬೇಕು.

* ವಯೋಮಿತಿ ಅರ್ಹತೆಗಳು: ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 28 ವರ್ಷದೊಳಗಿರಬೇಕು.

ವೇತನ : ಕಿರಿಯ ಸಹಾಯಕ ಆಗಿ ನೇಮಕಗೊಂಡ ಅಭ್ಯರ್ಥಿಗಳಿಗೆ ಮಾಸಿಕ 32,000 ದಿಂದ 35,200 ರೂ. ವೇತನ ಸಿಗಲಿದೆ.

ಕಿರಿಯ ಸಹಾಯಕ ಹುದ್ದೆಗಳಿಗೆ ಹೇಗೆ ನೇಮಕಾತಿ ಮಾಡಿಕೊಳ್ಳಲಾಗುವುದು?

ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲನೇ ಹಂತದಲ್ಲಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಿ ನಂತರದಲ್ಲಿ ಸಂದರ್ಶನ ನಡೆಸಿ ಇದರಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Application fee : ಆನ್ಲೈನ್ ಮೂಲಕ ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 800ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.

ನೇಮಕಾತಿಯ ಪ್ರಮುಖ ದಿನಾಂಕಗಳು :

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14/08/2024

* ಆನ್ಲೈನ್ ಪರೀಕ್ಷೆ ಸಂಭಾವ್ಯ ದಿನಾಂಕ : ಸೆಪ್ಟೆಂಬರ್ 2024

ಅರ್ಜಿ ಸಲ್ಲಿಸಲು ಈ ಲಿಂಕ್ ಗೆ ಕ್ಲಿಕ್ ಮಾಡಿ: https://www.lichousing.com/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ