ಎಲೆಕ್ಟ್ರಿಕ್ ಆಟೋ ರಿಕ್ಷಾಗಳ ಪರವಾನಗಿ ವಾಪಸ್ ಪಡೆಯಲು ಸಾಧ್ಯವಿಲ್ಲ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟನೆ
ಮಂಗಳೂರು: ಜಿಲ್ಲೆಯಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳ ಪರವಾನಗಿ ವಾಪಸ್ ಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಆಟೋ–ರಿಕ್ಷಾ ಮಾಲೀಕರು ಮತ್ತು ಚಾಲಕರೊಂದಿಗಿನ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಮತ್ತು ಹೈಕೋರ್ಟ್ ನ ನಿರ್ದೇಶನದ ಮೇರೆಗೆ ಈ ಆದೇಶವನ್ನು ಕಾನೂನು ಚೌಕಟ್ಟಿನಲ್ಲಿ ಹೊರಡಿಸಲಾಗಿದೆ. ಸಂಬಂಧಪಟ್ಟವರು ಮೇಲ್ಮನವಿಯ ಮೂಲಕ ಹೆಚ್ಚಿನ ಸ್ಪಷ್ಟೀಕರಣವನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ.
‘ಯಾವುದೇ ನಗರ (ವಲಯ-1) ಅಥವಾ ಗ್ರಾಮಾಂತರ (ವಲಯ-2) ನಿರ್ಬಂಧಗಳಿಲ್ಲದೆ ಇ–ಆಟೋಗಳು ಕಾರ್ಯನಿರ್ವಹಿಸಲು ಕೇಂದ್ರ ಸರ್ಕಾರವು ಉಚಿತ ಪರವಾನಗಿಗಳನ್ನು ನೀಡಿದೆ. ಇದನ್ನು ಮಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಜಾರಿಗೆ ತರಲಾಗುತ್ತಿದೆ. ಆದರೆ, ತಮಿಳುನಾಡಿನಲ್ಲಿ ನಿರ್ಬಂಧ ಹೇರಲಾಗಿದೆ. ಇಲ್ಲಿ ಅಂತಹ ನಿರ್ಬಂಧಗಳು ಜಾರಿಯಾಗಬೇಕಾದರೆ ರಾಜ್ಯ ಮಟ್ಟದಲ್ಲಿ ಜಾರಿಯಾಗಬೇಕು. ಚಿಕ್ಕಮಗಳೂರಿನ ಆಟೋ ರಿಕ್ಷಾ ಚಾಲಕರು ಈಗಾಗಲೇ ತಮಿಳುನಾಡಿನಲ್ಲಿರುವಂತಹ ನಿರ್ಬಂಧಗಳು ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎಂದು ಅವರು ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97




























