ಭಾಷಣದ ಸುಳ್ಳುಗಳು ಜನರ ಮೇಲೆ ಪರಿಣಾಮ ಬೀರುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ - Mahanayaka

ಭಾಷಣದ ಸುಳ್ಳುಗಳು ಜನರ ಮೇಲೆ ಪರಿಣಾಮ ಬೀರುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

mallikarjuna karge
02/05/2024


Provided by

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ದ್ವೇಷ ಭಾಷಣ”ಗಳನ್ನು ಮಾಡುವ ಬದಲು ಕಳೆದ ಹತ್ತು ವರ್ಷಗಳಲ್ಲಿ ನಿಮ್ಮ ಸರ್ಕಾರದ ಸಾಧನೆಗೆಳ ಆಧಾರದ ಮೇಲೆ ಮತ ಕೇಳುವಂತೆ ಮಲ್ಲಿಕಾರ್ಜುನ ಖರ್ಗೆ ಮೋದಿಯವರಿಗೆ ಹೇಳಿದ್ದಾರೆ.

ಎನ್‌.ಡಿ.ಎ ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಬರೆದ ಪತ್ರ ಉಲ್ಲೇಖಿಸಿ ಮರು ಪತ್ರ ಬರೆದಿರುವ ಖರ್ಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಗ್ಗೆ ಏನೇ ಸುಳ್ಳು ಹೇಳಿದರೂ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಏನು ಬರೆದಿದೆ ಮತ್ತು ನಾವು ಏನು ಭರವಸೆ ನೀಡಿದ್ದೇವೆ ಎಂಬುದನ್ನು ಸ್ವತಃ ಮತದಾರರು ಓದಿ ಅರ್ಥಮಾಡಿಕೊಳ್ಳುವಷ್ಟು ಬುದ್ಧಿವಂತರಾಗಿದ್ದಾರೆ. ನಮ್ಮ ಖಾತರಿಗಳು ತುಂಬಾ ಸರಳ ಮತ್ತು ಸ್ಪಷ್ಟವಾಗಿದೆ. ನಾವು ಅವರಿಗೆ ಅದನ್ನು ವಿವರಿಸಬೇಕಾಗಿಲ್ಲ ಎಂದು ಮೋದಿಗೆ ತಿರುಗೇಟು ನೀಡಿದ್ದಾರೆ.

ಮೋದಿಗೆ ಪತ್ರದ ಮೂಲಕ ಸ್ಪಷ್ಟನೆ ನೀಡಿರುವ ಖರ್ಗೆ, ಮೊದಲ ಹಂತದ ಮತದಾನದ ಬಳಿಕ ನೀವು ಹತಾಶೆಗೊಂಡಂತೆ ಕಾಣುತ್ತಿದೆ. ನಿಮ್ಮ ಭಾಷಣದ ಸುಳ್ಳುಗಳು ಜನರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಭಾವಿಸುದಂತಿದೆ. ಅದಕ್ಕಾಗಿ ನಿಮ್ಮ ಸುಳ್ಳುಗಳನ್ನು ಎನ್‌ಡಿಎ ಅಭ್ಯರ್ಥಿಗಳು ಮುಂದುವರಿಸಬೇಕು ಎಂದು ಬಯಸಿ ಪತ್ರ ಬರೆದಂತಿದೆ. ಆದರೆ ಒಂದು ಸುಳ್ಳನ್ನು ಸಾವಿರ ಬಾರಿ ಪುನರಾವರ್ತಿಸಿದರೂ ಅದು ಸತ್ಯವಾಗುವುದಿಲ್ಲ ಎಂದು ಅವರು ಹೇಳಿದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ