10:01 PM Thursday 21 - August 2025

ಲೈಟ್ ಬಾಯ್ ಸಾವು ಪ್ರಕರಣ: ಯೋಗರಾಜ್ ಭಟ್ ಸಹಿತ ಮೂವರ ವಿರುದ್ಧ ಎಫ್ ಐಆರ್

yogaraj bhat
06/09/2024

ಬೆಂಗಳೂರು: ಲೈಟ್ ಬಾಯ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ  ಎಫ್ ಐಆರ್ ದಾಖಲಾಗಿದೆ. ಚಿತ್ರೀಕರಣ ಸಂದರ್ಭದಲ್ಲಿ ಲೈಟ್ ಬಾಯ್ ಸಾವಿಗೀಡಾಗಿದ್ದರು.

ಲೈಟ್ ಬಾಯ್ ಮೋಹನ್‌ ಸಾವನ್ನಪ್ಪಿದವರಾಗಿದ್ದಾರೆ. ಸೆ.3ರಂದು ಮಾದನಾಯಕನಹಳ್ಳಿ ಸಮೀಪದ ವಿಆರ್‌ಎಲ್ ಅರೇನಾ ಬಳಿ ಮನದ ಕಡಲು ಶೂಟಿಂಗ್ ವೇಳೆ  30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೋಹನ್‌ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಗೊರಗುಂಟೆ ಪಾಳ್ಯದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೋಹನ್ ಗುರುವಾರ ಸಾವನ್ನಪ್ಪಿದ್ದಾರೆ.

ಮೋಹನ್ ಸಾವಿನ ಹಿನ್ನೆಲೆಯಲ್ಲಿ ಚಿತ್ರದ ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ ಐಆ‌ರ್ ದಾಖಲಾಗಿದೆ ಎಂದು ವರದಿಯಾಗಿದೆ.

ಚಿತ್ರೀಕರಣದ ವೇಳೆ ಮುನ್ನೆಚ್ಚರಿಕೆ ಕೈಗೊಳ್ಳದ ಕಾರಣ ಯೋಗರಾಜ್ ಭಟ್, ಪ್ರೊಡಕ್ಷನ್ ಮ್ಯಾನೇಜ‌ರ್ ಸುರೇಶ್ ಸೇರಿ ಮೂವರ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ ಐಆ‌ರ್ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version