ಕಡಲತೀರದಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳಿಗೆ ಬಡಿದ ಸಿಡಿಲು: ವಿಡಿಯೋ ಕಂಡು ಮರುಗಿದ ಜನ - Mahanayaka

ಕಡಲತೀರದಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳಿಗೆ ಬಡಿದ ಸಿಡಿಲು: ವಿಡಿಯೋ ಕಂಡು ಮರುಗಿದ ಜನ

struck lightning
29/05/2024


Provided by

ಕಡಲತೀರದಲ್ಲಿ ಸಿಡಿಲು ಬಡಿದು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ಪೋರ್ಟೊರಿಕೊ ಕಡಲತೀರದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ಮೇ 27 ರಂದು ನಡೆದ ಘಟನೆಯಲ್ಲಿ ಮೂವರು ಮಕ್ಕಳಿಗೆ ಗಾಯವಾಗಿದ್ದು, ಈ ಪೈಕಿ ಒಂದು ಮಗು ಗಂಭೀರವಾಗಿ ಗಾಯಗೊಂಡಿದೆ ಎಂದು ಪೋರ್ಟೊ ರಿಕನ್ ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಮಕ್ಕಳು 7, 10 ಮತ್ತು 12 ವರ್ಷ ವಯಸ್ಸಿನವರಾಗಿದ್ದಾರೆ. ಅವರಿಗೆ ಅಗುಡಿಲ್ಲಾದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಾಷಿಂಗ್ಟನ್ ಪೋಸ್ಟ್ ವರದಿ ಪ್ರಕಾರ, ಸಿಡಿಲು ಬಡಿದು ಗಾಯಗೊಂಡ 12 ವರ್ಷದ ಮಗು ಗಂಭೀರ ಸ್ಥಿತಿಯಲ್ಲಿದೆ ಎಂದು ಹೇಳಲಾಗಿದೆ.

ಮಕ್ಕಳಿಗೆ ಸಿಡಿಲು ಬಡಿದ ದೃಶ್ಯ ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳಲಾಗಿದ್ದು, ಸಿಡಿಲು ಬಡಿದ ತಕ್ಷಣವೇ ಮಕ್ಕಳು ಪ್ರಜ್ಞಾಹೀನರಾಗಿ ನೆಲಕ್ಕೆ ಉರುಳುತ್ತಿರುವ ದೃಶ್ಯ ಕಂಡು ಬಂದಿದೆ. ಅಲ್ಲದೇ ಅವರನ್ನು ಇತರರು ಎಬ್ಬಿಸಲು ಯತ್ನಿಸುತ್ತಿದ್ದು, ಪ್ರಥಮ ಚಿಕಿತ್ಸೆ ನೀಡುತ್ತಿರುವುದು ಕಾಣಬಹುದಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ