1:57 PM Saturday 31 - January 2026

ದೇವಸ್ಥಾನದ ಹೊರಾಂಗಣದಲ್ಲಿ ನಿಂತಿದ್ದಾಗ ಬಡಿದ ಸಿಡಿಲು: ವ್ಯಕ್ತಿ ಸಾವು

chikkamagaluru
11/06/2023

ಚಿಕ್ಕಮಗಳೂರು:  ದೇವಸ್ಥಾನದ ಹೊರಾಂಗಣದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ  ಸಿಡಿಲು ಬಡಿದ ಪರಿಣಾಮ  ಅವರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ನಡೆದಿದೆ.

ತರೀಕೆರೆ ತಾಲೂಕಿನ ಬಾವಿಕೆರೆಯ ಗಂಜೀಗೆರೆ ಮೂಲದ ವ್ಯಕ್ತಿ ಮುಖೇಶ್ (40) ಮೃತಪಟ್ಟವರಾಗಿದ್ದಾರೆ. ಇವರು ದೇವಸ್ಥಾನದ ಹೊರಾಂಗಣದಲ್ಲಿ ನಿಂತಿದ್ದಾಗ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಗಾಯಾಳುಗಳಿಗೆ ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿರುವ ವೈದ್ಯರು, ಅವರು ಚೇತರಿಸಿಕೊಂಡ ಬಳಿಕ  ವಾಪಸ್ ಮನೆಗೆ ಕಳುಹಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version